ರಾಯಚೂರು : ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರು ಮತ್ತು ಸರ್ವ ಜನಾಂಗದ ನಾಯಕ, ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀ ಬಷೀರುದ್ದೀನ್ ಇವರಿಗೆ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಒತ್ತಾಯಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ನಿಯೋಗದೊಂದಿಗೆ ಸಂಸ್ಥಾಪಕ ರಾಜ್ಯಾಧ್ಯಕ್ಷರು ಅಖಂಡ ಕರ್ನಾಟಕ ರಕ್ಷಣಾ ಸಮಿತಿ (ಕನ್ನಡಿಗರ ಸಾರಥ್ಯ) ರಾಯಚೂರು ಜಿಲ್ಲಾ ಘಟಕದ ವತಿಯಿಂದ ನಿಯೋಗ ತೆರಳಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ರಾಯಚೂರು ನಗರದ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರು, ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಬಷೀರುದ್ದೀನ್ ಇವರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿಯ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂದು ನಮ್ಮ ಜಂಟಿ ಸಂಘಟನೆಯ ಮುಖಾಂತರ ಮನವಿ ಮಾಡಿಕೊಳ್ಳುತ್ತೇವೆ.
ಏಕೆಂದರೆ ಸರ್ವ ಜನಾಂಗದ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ನಾಯಕತ್ವ ಇವರಲ್ಲಿದೆ. ಕಳೆದ ಮೂರು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಪ್ರಬಲ ಆಕಾಂಕ್ಷಿಯಾಗಿದ್ದರು. ಪಕ್ಷ ಅವಕಾಶ ಕೊಟ್ಟಿದ್ದರೆ ಶ್ರೀ ಬರುದ್ದೀನ್‌ರವರು ಶಾಸಕರಾಗುತ್ತಿದ್ದರು. ಆದರೆ ಅಂದು ಪಕ್ಷದ ಹೈಕಮಾಂಡ್ ಮತ್ತು ಸ್ವತಃ ಮುಖ್ಯಮಂತ್ರಿಗಳಾದ ತಾವು ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಶ್ರೀ ಬಶೀರುದ್ದೀನ್‌ರವರಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಮಾತು ಕೊಟ್ಟಿದ್ದೀರಿ. ಅದರಂತೆ ಈಗ ಕಾಲ ಕೂಡಿ ಬಂದಿದೆ. ಕೊಟ್ಟ ಮಾತಿನಂತೆ ತಾವು ಮತ್ತು ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಂಡು ಶ್ರೀ ಬಷೀರುದ್ದೀನ್‌ರವರಿಗೆ ಹಟ್ಟಿ ಚಿನ್ನದ ಗಣಿಯ ನಿಗಮ ಮಂಡಳಿಯ ಸ್ಥಾನಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು. ಇದರಿಂದ ಪಕ್ಷದಲ್ಲಿ ದುಡಿಯುತ್ತಿರುವ ಇತರ ಕಾರ್ಯಕರ್ತರಿಗೂ ಸಹ ಮುಂದಿನ ದಿನಗಳಲ್ಲಿ ಸ್ಥಾನಮಾನ ದೊರೆಯುತ್ತದೆಂಬ ನಂಬಿಕೆ ಬರುತ್ತದೆ. ಶ್ರೀ ಬಶೀರುದ್ದೀನ್‌ರವರು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಾಗಿನಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಪಕ್ಷದ ತತ್ವ ಸಿದ್ಧಾಂತಗಳ ಪ್ರಕಾರ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಮತ್ತು ಬೇರೆ ಪಕ್ಷದ ಘಟಾನುಘಟಿ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಶಾಸಕರ ಟಿಕೇಟ್ ಕೊಡುತ್ತೇವೆಂದು ಹೇಳಿದರೂ ಕೂಡ ಅವರು ಕಾಂಗ್ರೆಸ್ ಬಿಟ್ಟು ಅಧಿಕಾರದಾಸೆಗೆ ಬೇರೆ ಪಕ್ಷಕ್ಕೆ ಹೋಗಲಿಲ್ಲ, ಮತ್ತು ಮುಂಬರುವ ಲೋಕಸಭಾ ಚುನಾವಣೆ ಇರುವುದರಿಂದ ಇಂಥ ವ್ಯಕ್ತಿಗೆ ಸೂಕ್ತ ಸ್ಥಾನಮಾನ ಕೊಟ್ಟರೆ ಲೋಕಸಭಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಶ್ರಮವಹಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ದುಡಿಯುತ್ತಾರೆಂಬ ನಂಬಿಕೆ ನಮ್ಮ ಸಂಘಟನೆದ್ದು ಆಗಿದೆ.
ರಾಜಶೇಖರ ಮಾಚರ್ಲಾ
ಸಂಸ್ಥಾಪಕ ರಾಜ್ಯಾಧ್ಯಕ್ಷರು
ಅಖಂಡ ಕರ್ನಾಟಕ ರಕ್ಷಣಾ ಸಮಿತಿ