ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಂದರೆ ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಚನ್ನಪಟ್ಟಣ, ಮುಂಡಗೋಡ, ಶಿರಾಲಿ, ಕದ್ರಾ, ಗೋಕರ್ಣ, ಸಿದ್ದಾಪುರ, ಕೋಟ, ಕುಂದಾಪುರ, ಸಂಕೇಶ್ವರ, ಗೋಕಾಕ, ಬೈಲಹೊಂಗಲ, ಪೊನ್ನಂಪೇಟೆ, ಭಾಗಮಂಡಲ, ಹುಣಸೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದೆ.
ಬೆಂಗಳೂರಿನ ಕೆಲವೆಡೆ ನಿನ್ನೆ ಹಗುರ ಮಳೆಯಾಗಿದೆ, ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.