Ad image

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಪ್ರಕಟ

Vijayanagara Vani
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಪ್ರಕಟ

ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಒಟ್ಟು 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್‌ ಆಗಿದ್ದಾರೆ. ರಾಜ್ಯಾದ್ಯಂತ ಶೇ 73.45ರಷ್ಟು ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಹಾರೈಸಿದ್ದಾರೆ.ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತ ಸಿಗಲಿದೆ. ಹಾಗಾಗಿ ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ವಿವಿಧ ವಿಭಾಗಗಳಲ್ಲಿ ರ್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೂಡ ದ್ವಿತೀಯ ಪಿಯು ವಿದಾರ್ಥಿಗಳನ್ನು ಅಭಿನಂದಿಸಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಅನುತ್ತೀರ್ಣಗೊಂಡವರು ಆತಂಕ ಪಡದೆ ಮತ್ತೆ ಪರೀಕ್ಷೆ ಎದುರಿಸಿ. ಸೋಲೇ ಗೆಲುವಿಗೆ ಸೋಪಾನ ಎನ್ನುವುದನ್ನು ಮರೆಯದಿರಿ. ನಿಮ್ಮ ಮುಂದಿನ ಶೈಕ್ಷಣಿಕ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ.

 ಮೊದಲ ಸ್ಥಾನ: ಲಕ್ಷ್ಮಿ ಹೆಬ್ಬಾಳ್ಕರ್‌ ಸಂತಸ ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ.93.90 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಖುಷಿಯ ಸಂಗತಿ ಎಂದು ಹೇಳಿದ್ದಾರೆ. ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿರುವ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಮತ್ತಷ್ಟು ಉಜ್ವಲವಾಗಿರಲಿ ಎಂದು ಹಾರೈಸಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇಕಡಾ 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದರು. ಈ ಪೈಕಿ  1,99,227 ಬಾಲಕರು ಉತ್ತೀರ್ಣರಾಗಿದ್ದಾರೆ

 

Share This Article
error: Content is protected !!
";