Ad image

ಕನ್ನಡೇತರರಿಗೆ/ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ: ಅರ್ಜಿ ಆಹ್ವಾನ

Vijayanagara Vani
ಕನ್ನಡೇತರರಿಗೆ/ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ: ಅರ್ಜಿ ಆಹ್ವಾನ
ಬಳ್ಳಾರಿ,ಮೇ 27
ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು, ವಸತಿ ಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳುತ್ತಿದ್ದು, 2025-26ನೇ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.
ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ನೀಡಲಾಗುತ್ತದೆ.
ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂ.06 ರೊಳಗಾಗಿ ಅರ್ಜಿಯನ್ನು ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-275182 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";