ಬಳ್ಳಾರಿ,ಮೇ 31
ರಾಜ್ಯ ಸರ್ಕಾರವು 2025 ರ ಆಯವ್ಯಯದಲ್ಲಿ ಘೋಷಿತ ಕಾರ್ಯಕ್ರಮವಾದ ದೇಶಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ದೇಶಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ದೇಶಿ ತಳಿಗಳನ್ನು ಬೆಳೆದು ಸಂರಕ್ಷಿಸುತ್ತಿರುವ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ತಾವು ಬೆಳೆಯುವ ದೇಶಿ ತಳಿಗಳ ವಿವರವನ್ನು ನೋಂದಾಯಿಸಬೇಕು.
ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸುವ ಮತ್ತು ಸಂರಕ್ಷಿಸುವ ಉದ್ದೇಶಕ್ಕೆ ಕೈ ಜೋಡಿಸಬೇಕು. ಕೃಷಿ ಇಲಾಖೆಯ ಅಧಿಕೃತ ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಂ. ಸೋಮಸುಂದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.