ಯೋಜನೆಗಳು: ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬೆಸೈಟ್ ವಿಳಾಸ: www.kaad.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಅಥವಾ 8050770005 ಅಥವಾ ರಾಯಚೂರು ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08532-250440ಗೆ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ರಾಯಚೂರು ಜೂನ್ 09 : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.