ಬಳ್ಳಾರಿ,ಜೂ.17
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಜೂ.18 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಳ್ಳುವರು.
ಅಂದು ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಗೆ ಆಗಮಿಸಿ, ಜಿಲ್ಲೆಯ ವಿವಿಧ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನೀರಿಕ್ಷಿತ ಭೇಟಿ ಮತ್ತು ಪರಿಶೀಲನೆ ನೀಡುವರು.
ಬಳಿಕ ಮಧ್ಯಾಹ್ನ 02.30 ಕ್ಕೆ ನಗರದ ಜಿಲ್ಲಾ ಪಂಚಾಯತ್ನ ನಜೀರ್ ಸಭಾಂಗಣದಲ್ಲಿ ಆರ್.ಟಿ.ಇ, ಪೋಕ್ಸೋ ಮತ್ತು ಬಾಲನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.