Ad image

ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ರವರು ಜೂನ್ 21 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ, ಸಾರ್ವಜನಿಕರು ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೋರಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ವಿಲೇವಾರಿ ಮಾಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.

Vijayanagara Vani
ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ರವರು ಜೂನ್ 21 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ, ಸಾರ್ವಜನಿಕರು ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೋರಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ವಿಲೇವಾರಿ ಮಾಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.
ಇಂದು (ಜೂ.17) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಅವರು ಜೂನ್ 21 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ 2024-25 ಮತ್ತು 2025-26 ನೇ ಸಾಲಿನ ಏಪ್ರಿಲ್ ಮಾಹೆಯವರೆಗೂ ಸ್ವೀಕರಿಸಿ ವಿಲೇವಾರಿ ಮಾಡಿದ ಅರ್ಜಿಗಳು ಹಾಗೂ ಬಾಕಿ ಇರುವ ಅರ್ಜಿಗಳ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ಮಾಹಿತಿ ಹಕ್ಕು ಕಾಯ್ದೆಯಡಿ ಮೇಲ್ಮನವಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮಾಹಿತಿ ನೀಡಬೇಕು, ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಗೊಂದಲದ ಅಂಶಗಳು ಇದ್ದಲ್ಲಿ ಅದನ್ನು ಪಟ್ಟಿ ಮಾಡಿ ಆಯಕಕ್ತರ ಗಮನಕ್ಕೆ ತನ್ನಿ, ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಬೇಡಿ ಎಂದು ತಿಳಿಸಿದರು.
ಜೂನ್ 21 ರಂದು 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯುಕ್ತರು ಮಾಹಿತಿ ಹಕ್ಕು ಕಾಯಿದೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ ಮತ್ತು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ನಂತರ ಮಧ್ಯಾಹ್ನ 12:30 ಕ್ಕೆ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸಕಾಲ ಅರ್ಜಿಗಳ ಸರಿಯಾಗಿ ವಿಲೇವಾರಿ ಆಗದಿರುವುದು ಗಮನಕ್ಕೆ ಬಂದಿದೆ, ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಸಕಾಲ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಸಕಾಲ ಅರ್ಜಿಗಳು ನಿಗಧಿತ ಸಮಯದಲ್ಲಿ ವಿಲೇವಾರಿ ಮಾಡದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದಂಡ ವಿಧಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಬಾಬು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಡಾ. ಪುಷ್ಪಾ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಪುಷ್ಪಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಮಲಾ ಎಸ್. ಎಚ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
error: Content is protected !!
";