–ಜೂನ್-17:
ಜತ್ತ ತಾಲೂಕಿನ ಉಮದಿ ಶ್ರೀ ರಂಭಾಪುರಿ ಶಾಖಾ ಮಠ ಮಹಾಸಂಸ್ಥಾನ ಹಿರೇಮಠದಲ್ಲಿ ಜೂನ್ 20ರಂದು ಸಂಜೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಜರುಗಲಿದೆ.
ಸಮಾರಂಭದಲ್ಲಿ ಬೆಳ್ಳಂಕಿ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು, ಆಲಮೇಲ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ತಡವಲಗಾ ಅಭಿನವ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ಜಗಜೇವಣಿ ಮುಪ್ಪಿನಾರ್ಯ ಶಿವಾಚಾರ್ಯ ಸ್ವಾಮಿಗಳು ಹಾಗೂ ಗುಡ್ಡಾಪುರದ ಗುರಪಾದೇಶ್ವರ ಶಿವಾಚಾರ್ಯ ಸ್ವಾಮಿಗಳು, ವೇ.ಬಸವರಾಜ ಸ್ವಾಮಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಮಾರಂಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ, ಬಾಳೆಹೊನ್ನೂರು
ಉಮದಿ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ
