Ad image

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

Vijayanagara Vani
ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ
ಕೊಪ್ಪಳ ಜೂನ್ 18  ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನೂತನ ಡಿಸಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಕರ್ನಾಟಕ ಕೇಡರ್ 2016ರ ಐಎಎಸ್ ಬ್ಯಾಚನ ಅಧಿಕಾರಿಯಾದ ಸುರೇಶ ಬಿ. ಇಟ್ನಾಳ ಅವರು ಮೂಲತಃ ಕರ್ನಾಟಕದವರಾಗಿದ್ದು, ಅವರು ಈ ಮೊದಲು ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಅಧಿವೇಶನದ ವಿಶೇಷಾಧಿಕಾರಿಯಾಗಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ಧಾರವಾಡ ಮತ್ತು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಸದ್ಯ ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
error: Content is protected !!
";