Ad image

ಕೃಷಿ ಪರಿಕರ ಮಾರಾಟದ ಬೆಲೆಗಳನ್ನು ನಾಮಫಲಕಗಳಲ್ಲಿ ಪ್ರಕಟಿಸಲು ಸೂಚನೆ

Vijayanagara Vani
ಚಿತ್ರದುರ್ಗಜೂ.19:
ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು. ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ 2-3 ವಾರಗಳಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಹಲವು ಭಾಗಗಳಲ್ಲಿ ಮೆಕ್ಕೆಜೋಳ 10 ರಿಂದ 25 ದಿನಗಳ ಬೆಳವಣಿಗೆ ಹಂತವಿರುವ ಬೆಳೆ ಇರುತ್ತದೆ. ಇದಕ್ಕೆ ಯೂರಿಯಾ ರಸಗೊಬ್ಬರವನ್ನು ಮೇಲು ಗೊಬ್ಬರವಾಗಿ ರೈತರು ಬಳಸುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ಮೂಲಕ ದೂರುಗಳು ಸ್ವೀಕೃತವಾಗುತ್ತಿವೆ. ಅದುದರಿಂದ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದೆಂದು ಹಾಗೂ ಕಡ್ಡಾಯವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದರ ಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ರಸಗೊಬ್ಬರ (ನಿರವಯವ, ಸಾವಯವ ಅಥವಾ ಮಿಶ್ರಿತ) (ನಿಯಂತ್ರಣ) ಆದೇಶ, 1985ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದೆಂದು ಹಾಗೂ ಕೃತಕ ರಸಗೊಬ್ಬರ ಅಭಾವ ಸೃಷ್ಠಿಸಿದ್ದು ಕಂಡುಬಂದಲ್ಲಿ ರಸಗೊಬ್ಬರ ಮಾರಾಟ ಪರವಾನಗಿಯನ್ನು ಅಮಾನತ್ತು/ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದ್ದಾರೆ.

Share This Article
error: Content is protected !!
";