Ad image

ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

Vijayanagara Vani
ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ
ಶಿವಮೊಗ್ಗ, ಜೂನ್. 19;  : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. ಸರ್ಕಾರದ ನಿಯಾಮವಳಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು ಮತ್ತು ಹುದ್ದೆಗಳನ್ನು ಹೆಚ್ಚಿಸುವುದು ಹಾಗೂ ಅರ್ಜಿಗಳನ್ನು ತಿರಸ್ಕರಿಸುವುದು ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ. ಮಾರ್ಗ ಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಕಂ ಅನುಭವ ಕಂ ಅರ್ಹತೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಂಬAಧ ಪಟ್ಟ÷ ಹುದ್ದೆಗಳಿಗೆ ಸ್ವಯಂ ದೃಢೀಕೃರಿಸಿದ ದಾಖಲೆಗಳ ನಕಲು ಪ್ರತಿಗಳೊಂದಿಗೆ ಇತ್ತೀಚಿನ ಭಾವಚಿತ್ರ, ಗುರುತ್ತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಮತ್ತು ಸ್ವವಿವರದೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಜೂನ್ 26 ರಂದು ಮಧ್ಯಾಹ್ನ 10.00 ರೊಳಗಾಗಿ ಸಲ್ಲಿಸುವುದು. ಜೂನ್ 27 ರಂದು ಸ್ವೀಕರಿಸಿದ ಅರ್ಜಿಗಳ ನೇರ ಸಂದರ್ಶನ ನಡೆಸಲಾಗುವುದು. ಸಂದರ್ಶನ ನಡೆಯುವ ಸ್ಥಳ ಮತ್ತು ವಿಳಾಸ ಮಿಮಿಂಚೆ ಮತ್ತು ದೂರವಾಣಿ ಮೂಲಕ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೂ. ಸಂ. 08182-222382, 08182-200337, ಮೊ.ಸಂ. 9481691580, 9108155703 ಗಳನ್ನು ಸಂಪರ್ಕಿಸುವುದು.

Share This Article
error: Content is protected !!
";