ವಿಜಯನಗರ (ಹೊಸಪೇಟೆ), ಜೂ.21 ಶ್ರೀ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯ ನಿಮಿತ್ತವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನ ಮತ್ತು ಸಾಧನೆಗಳ ಕುರಿತು ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರದಂದು ಶ್ರೀ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆವತಿಯಿಂದ ತಾಲೂಕಿನ ಶಿಕ್ಷಣ ಇಲಾಖೆಯ ಮೂಲಕ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಹಾಗೂ ಕಾರ್ಯಕ್ರಮ ಅನುಷ್ಠಾನಗೊಳಿಸಲು ಪ್ರತಿ ತಾಲೂಕಿಗೆ ಒಂದು ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಒಂದು ತಾಲೂಕಿನಲ್ಲಿ ನಾಲ್ಕು ಕಾರ್ಯಕ್ರಮ ಆಯೋಜಿಸಲು ಅವಕಾಶವಿದ್ದು, ಒಂದು ಕಾರ್ಯಕ್ರಮಕ್ಕೆ 25 ಸಾವಿರ ರೂ ನಿಗದಿಪಡಿಸಲಾಗಿದೆ.
ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶ್ರೀ ನಾಡಪ್ರಭು ಕೆಂಪೇಗೌಡರ ಕುರಿತು ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಆಶುಭಾಷಣ, ಕವನ ವಾಚನ, ಗಾಯನ ಹಾಗೂ ಚಿತ್ರಕಲಾ ಸ್ಪಧೆೆðಗಳನ್ನು ಏರ್ಪಡಿಸಲಾಗಿದೆ. ಸ್ಪಧೆÉðಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜೂ.27 ರಂದು ಆಚರಿಸುವ ಶ್ರೀ ನಾಡಪ್ರಭು ಕೆಂಪೇಗೌಡ ಜಯಂತಿ ಅವರ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ರಂಗಣ್ಣನವರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.