Ad image

ಕೈಗಾರಿಕಾ ನಿವೇಶನಗಳ ಹಂಚಿಕೆಗಾಗಿ ಬೇಡಿಕೆ: ಉದ್ದಿಮೆದಾರರಿಂದ ಅರ್ಜಿ ಆಹ್ವಾನ

Vijayanagara Vani
ಬಳ್ಳಾರಿ,ಜೂ.21
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಸಂಜೀವರಾಯನ ಕೋಟೆ ಗ್ರಾಮದಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲು (155 ಎಕರೆ) ಉದ್ದೇಶಿಸಿದ್ದು, ಈ ಕೈಗಾರಿಕಾ ಪ್ರದೇಶದಲ್ಲಿ ಜೀನ್ಸ್, ಜವಳಿ ಉತ್ಪನ್ನಗಳ ಕೈಗಾರಿಕೆಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಉದ್ದಿಮೆದಾರರಿಂದ ನಿವೇಶನ ಹಂಚಿಕೆಗಾಗಿ ಬೇಡಿಕೆಯ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಉದ್ದಿಮೆದಾರರು, ತಮ್ಮ ಅರ್ಜಿಯನ್ನು ಜುಲೈ 11 ರೊಳಗಾಗಿ ಇ-ಮೇಲ್ ಮೂಲಕ ಅಥವಾ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬಳ್ಳಾರಿ ಅಥವಾ ಉಪ ನಿರ್ದೇಶಕರು, ಜವಳಿ ಮತ್ತು ಕೈಮಗ್ಗ ಇಲಾಖೆ, ಬಳ್ಳಾರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಬಳ್ಳಾರಿ. ಈ ಕಚೇರಿಗಳ ವಿಳಾಸಕ್ಕೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ: [email protected], [email protected], [email protected] ಅಥವಾ ವೆಬ್ ಸೈಟ್ ವಿಳಾಸ: www,kiadb,in ಅಥವಾ ಮತ್ತು ಮೊ.7975234573, 9901313417, 9964768334 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";