Ad image

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

Vijayanagara Vani
ಶಿವಮೊಗ್ಗ,ಜೂ.21: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸತಿ ಜಲಶಕ್ತಿ ಯೋಜನೆ. ಅರಿವು ಶೈಕ್ಷಣಿಕ ಸಾಲ ಯೋಜನೆ-ಸಿಇಟಿ, ಎನ್‌ಇಇಟಿ ಕೌನ್ಸಲಿಂಗ್ ಮುಗಿದ ನಂತರ ಅರ್ಜಿ ಆಹ್ವಾನಿಸಲಾಗುವುದು.
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೆಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. 2019-20 ನೇ ಸಾಲಿನಿಂದ 2021-22 ನೇ ಸಾಲಿನವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ ಸಂಖ್ಯೆ 9448451111, ವೆಬ್‌ಸೈಟ್ kacdc.karnataka.gov.in ಇಲ್ಲಿ ಹಾಗೂ ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ 577201 ನ್ನು ಸಂಪರ್ಕಿಸಬಹುದೆAದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Share This Article
error: Content is protected !!
";