Ad image

ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ

Vijayanagara Vani
ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
ಬಳ್ಳಾರಿ,ಜೂ.25
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ಮತ್ತು ಮಿನೇರಾ ಸ್ಟೀಲ್ಸ್ ಸಹಯೋಗದಲ್ಲಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಬೃಹತ್ ರಕ್ತದಾನ ಶಿಬಿರ’ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಕ್ತದಾನ ಮಾಡಿದರು.
ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಎಂ.ಎ.ಆಸೀಫ್ ಅವರು ಒಳಗೊಂಡು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹ ರಕ್ತದಾನ ಮಾಡಿ ಪ್ರೇರಣೆಯಾದರು.
ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ನೌಕರರು ಮತ್ತು ಶಿಬಿರ ಯಶಸ್ವಿಗೆ ಸಹಕರಿಸಿದ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಭಿನಂದನೆ ಹೇಳಿದರು.

Share This Article
error: Content is protected !!
";