Ad image

ಕೊಪ್ಪಳ ನಗರಸಭೆ: ವಿಕಲಚೇತನ ಆರೈಕೆದಾರರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಕೊಪ್ಪಳ ಜುಲೈ 01 : ಕೊಪ್ಪಳ ನಗರಸಭೆಯ ಸನ್ 2025-26ನೇ ಸಾಲಿನ ಶೇ.5 ರ ಎಸ್.ಎಫ್.ಸಿ ಯೋಜನೆಯ ಹಾಗೂ ನಗರಸಭೆ ನಿಧಿ ಅನುದಾನದಡಿ ಶೇ.50 ರಷ್ಟು ವ್ಯಕ್ತಿಸಂಬಂಧಿತ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬ್ರಲ್ ಪಾಲಿಸಿ ಹೊಂದಿದ ವಿಕಲಚೇತನ ಮಕ್ಕಳ ಆರೈಕೆದಾರರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು. ವಿಕಲಚೇತನರ ಯುಡಿ ಐಡಿ ಕಾರ್ಡ್ ಹಾಗೂ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬ್ರಲ್ ಪಾಲಿಸಿ ಹೊಂದಿದ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಪುಸ್ತಕಗಳ ಪ್ರತಿಗಳೊಂದಿಗೆ ಜುಲೈ 31 ರೊಳಗೆ ನಗರಸಭೆ ಕಾರ್ಯಾಲಯಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
ಅವಧಿ ಮೀರಿ ಬಂದ ಹಾಗೂ ಅಪೂರ್ಣ ದಾಖಲಾತಿ ಹೊಂದಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";