ಕೊಪ್ಪಳ ಜುಲೈ 01 ಕೊಪ್ಪಳ ಜಿಲ್ಲೆಯಲ್ಲಿ ಈ ಸಲ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ ಹಾಗಾಗಿ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ವಿಮೆ ಮಾಡಲು ತಿಳಿಸಬೇಕೆಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಕೃಷಿ ಇಲಾಖೆಯ ಜಂಟಿ ನಿರ್ದೆಶಕರಿಗೆ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕೃಷಿ ಹಾಗೂ ಕೃಷಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಇಲ್ಲಿಯವರೆಗೆ ಸರಿಯಾಗಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ ಮುಂದೆಯು ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ರೈತರು ಬೆಳೆ ವಿಮೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಮಾಡಿಸಬೇಕು. ಕಳೆದ ವರ್ಷ ಎಷ್ಟು ಮಾಡಿದ್ದಾರೆ ಈ ಕುರಿತು ಅವರಿಗೆ ಸರಿಯಾಗಿ ಮಾಹಿತಿ ನೀಡಿ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲೆಯಲ್ಲಿ ಕ್ರಾಫ್ ಕಟಿಂಗ್ ಎಕ್ಸಪೇರಿಮಿಂಟ ಹೇಗೆ ನಡೆಯುತ್ತಿದೆ ಕಳೆದ ಸಲ ಏನಾದರೂ ಸಮಸ್ಯೆಗಳಾಗಿದ್ದರೆ ಅವುಗಳು ಈ ಸಲ ಮರುಕಳಿಸದಂತೆ ನೋಡಿಕೊಳ್ಳಬೇಕು. ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಯಾವುದೇ ನೆಪ ಹೇಳುವಹಾಗಿಲ್ಲ ಎಂದರು.
ಸಾಮಾಜಿಕ ಅರಣ್ಯ ವಿಭಾಗದಿಂದ ಬರುವ ವರ್ಷ ಜಿಲ್ಲೆಯಲ್ಲಿ ಒಂದು ಲಕ್ಷ ಗಿಡಗಳನ್ನು ಹಚ್ಚಬೇಕು. ರಸ್ತೆಯ ಎಲ್ಲಾ ಕಡೆಗಳಲ್ಲಿ ಹಚ್ಚುವುದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಕಾಂಪೌಂಡ್ ಒಳಗಡೆ ಆಯಾ ಇಲಾಖೆಯಿಂದ ಅವರಿಗೆ ಎಷ್ಟು ಗಿಡಗಳನ್ನು ಬೇಕು ಎಂಬ ಮಾಹಿತಿ ಪಡೆದು ಅವರಿಗೆ ಗಿಡಗಳನ್ನು ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ ಪೆಂಡಾರಿಗೆ ಸೂಚನೆ ನೀಡಿದರು.
ಕೃಷಿ ಸಂಬಂಧಿಸಿದ ಇಲಾಖೆಗಳು ಹಾಕಿಕೊಂಡ ಐದು ವರ್ಷಗಳ ಮಾಹಿತಿಯನ್ನು ಪಡೆದ ಜಿಲ್ಲಾಧಿಕಾರಿಗಳು. ಪೊಟೇಶನಲ್ ಜಿಐ ಟ್ಯಾಗ್ ಯಾವ ಉತ್ಪನ್ನ ನಮ್ಮ ಜಿಲ್ಲೆಯಲ್ಲಿದೆ. ಶ್ರೀ ಗಂಧ ಬೆಳೆಸುವವರಿಗೆ ಜಿಲ್ಲೆಯಲ್ಲಿ ಪ್ರೊಮೋಟ ಮಾಡಿ. ಯಾವುದೇ ಬೀಜ ಮತ್ತು ರಸಗೊಬ್ಬರಗಳ ಸಮಸ್ಯೆಗಳಾಗದಂತೆ ಕೃಷಿ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಪಶು ಸಂಗೋಪನೆ. ಹೈನುಗಾರಿಕೆ. ಮೀನು ಗಾರಿಕೆ. ಕೋಳಿ ಸಾಕಾಣಿಕೆ. ರೇಷ್ಮೆ. ರೈಸ್ ಟೆಕ್ನಾಲಜಿ ಪಾರ್ಕ್ ಸೇರಿದಂತೆ ಇತರೆ ಕೃಷಿ ಸಂಬಂಧಿಸಿದ ಇಲಾಖೆಯ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯ ನಂತರ ಜಿಲ್ಲಾಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ. ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ. ತೋಟಗಾರಿಕೆ ಇಲಾಖೆಯ ಉಪನಿರ್ದೆಶಕ ಕೃಷ್ಣ ಉಕ್ಕುಂದ. ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ್ ಪೆಂಡಾರಿ ಸೇರಿದಂತೆ ಕೃಷಿ ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.