ಚಿತ್ರದುರ್ಗಜುಲೈ01:
ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್ನಿಂದ “Kharif Crop Survey App – 2025-26 (ಮುಂಗಾರು ರೈತರಬೆಳೆ ಸಮೀಕ್ಷೆ-2025)” ಎಂದು ಹುಡುಕಿ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿ ಹಾಗೂ ಛಾಯಚಿತ್ರ ಅಪ್ಲೋಡ್ ಮಾಡಬಹುದಾಗಿದೆ.
ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಪಹಣಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಅಥವಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಸಹ ಬೆಳೆ ಮಾಹಿತಿಯನ್ನು ದಾಖಲಿಸಬಹುದು.
ಬೆಳೆ ವಿವರಗಳನ್ನು ದಾಖಲು ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುತ್ತೀರಿ. ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 18004253553 ಗೆ ಕರೆ ಮಾಡಬಹುದು ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ರೈತ ಸಂಪರ್ಕ ಕೇಂದ್ರ, ಅಥವಾ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
==========