ಚಿತ್ರದುರ್ಗಜುಲೈ01:
ಚಿತ್ರದುರ್ಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಗ್ರಾಮ ಪಂಚಾಯಿತಿ ಮಟ್ಟದ ವಿಮಾ ಘಟಕಕ್ಕೆ ಚಳ್ಳಕೆರೆ ತಾಲ್ಲೂಕಿಗೆ ಶೇಂಗಾ (ಮಳೆಯಾಶ್ರಿತ), ಚಿತ್ರದುರ್ಗ ತಾಲ್ಲೂಕಿಗೆ ಮುಸುಕಿನ ಜೋಳ (ಮಳೆಯಾಶ್ರಿತ) ಹಿರಿಯೂರು ತಾಲ್ಲೂಕಿಗೆ ನೆಲಗಡಲೆ (ಶೇಂಗಾ) (ಮಳೆಯಾಶ್ರಿತ) ಮತ್ತು ಸೂರ್ಯಕಾಂತಿ (ಮಳೆಯಾಶ್ರಿತ), ಹೊಳಲ್ಕೆರೆ ತಾಲ್ಲೂಕಿಗೆ ಮುಸುಕಿನ ಜೋಳ (ಮಳೆಯಾಶ್ರಿತ) ಮತ್ತು ರಾಗಿ (ಮಳೆಯಾಶ್ರಿತ) ಮೊಳಕಾಲ್ಮೂರು ತಾಲ್ಲೂಕಿಗೆ ನೆಲಗಡಲೆ (ಶೇಂಗಾ) (ಮಳೆಯಾಶ್ರಿತ), ಹೊಸದುರ್ಗ ತಾಲ್ಲೂಕಿಗೆ ರಾಗಿ (ಮಳೆಯಾಶ್ರಿತ) ಬೆಳೆಗಳನ್ನು ಮುಂಗಾರು ಹಂಗಾಮಿಗೆ ಬೆಳೆ ವಿಮೆಗೆ ಅಧಿಸೂಚನೆ ಮಾಡಲಾಗಿದೆ.
ಹೋಬಳಿ ಮಟ್ಟದ ವಿಮಾ ಘಟಕಗಳಿಗೆ ಹತ್ತಿ (ನೀರಾವರಿ), ಹತ್ತಿ (ಮಳೆಯಾಶ್ರಿತ), ಹೆಸರು (ಮಳೆಯಾಶ್ರಿತ) ಶೇಂಗಾ(ಮಳೆಯಾಶ್ರಿತ), ಶೇಂಗಾ (ನೀರಾವರಿ), ಹುರುಳಿ (ಮಳೆಯಾಶ್ರಿತ), ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಈರುಳ್ಳಿ (ಮಳೆಯಾಶ್ರಿತ), ಭತ್ರ (ನೀರಾವರಿ), ಸಜ್ಜೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ರಾಗಿ (ನೀರಾವರಿ), ರಾಗಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಜೋಳ (ನೀರಾವರಿ), ಜೋಳ (ಮಳೆಯಾಶ್ರಿತ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಧಿಸೂಚನೆ ಮಾಡಲಾಗಿದೆ. (ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ)
ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ಆಸಕ್ತ ರೈತರು ಬೆಳೆ ವಿಮೆಗೆ ನೋಂದಣಿ ಮಾಡಲು ಹೆಸರು (ಮಳೆಯಾಶ್ರಿತ), ಮತ್ತು ಈರುಳ್ಳಿ (ನೀರಾವರಿ), ಬೆಳೆಗಳಿಗೆ ದಿನಾಂಕ:15-07-2025 ಮತ್ತು ಹತ್ತಿ (ನೀರಾವರಿ) ಹತ್ತಿ (ಮಳೆಯಾಶ್ರಿತ), ಶೇಂಗಾ (ನೀರಾವರಿ), ಶೇಂಗಾ (ಮಳೆಯಾಶ್ರಿತ), ಹುರುಳಿ (ಮಳೆಯಾಶ್ರಿತ), ಮೆಕ್ಕೆಜೋಳ (ನೀರಾವರಿ), ಮೆಕ್ಕೆಜೋಳ (ಮಳೆಯಾಶ್ರಿತ), ಈರುಳ್ಳಿ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಜೋಳ (ಮಳೆಯಾಶ್ರಿತ), ಜೋಳ (ನೀರಾವರಿ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳಿಗೆ ದಿನಾಂಕ: 31-07-2025ರಂದು ಹಾಗೂ ನವಣೆ (ಮಳೆಯಾಶ್ರಿತ) ಭತ್ತ (ನೀರಾವರಿ), ರಾಗಿ (ಮಳೆಯಾಶ್ರಿತ), ರಾಗಿ (ನೀರಾವರಿ) ಬೆಳೆಗಳಿಗೆ ದಿನಾಂಕ:16-08-2025 ಕೊನೆಯ ದಿನಾಂಕವಾಗಿರುತ್ತದೆ.
ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.
ಆರ್ಥಿಕ ಸಂಸ್ಥೆಗಳು/ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರ (Common Service Centers)ಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುಷ್ಟಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು, ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂಗಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.
ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ Oriental General Insurance Company,, ಅನುಷ್ಟಾನ ಸಂಸ್ಥೆಯಾಗಿರುತ್ತದೆ. ರೈತರು ನೋಂದಾಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು.
ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ.ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.