Ad image

ರಾಬಕೊವಿ ಜಿಲ್ಲಾ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಒಟ್ಟು 52 ಉಮೇದುವಾರಿಕೆ ಸಲ್ಲಿಕೆ

Vijayanagara Vani
ಬಳ್ಳಾರಿ,ಜು.02
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಒಟ್ಟು 52 ನಾಮಪತ್ರ ಸಲ್ಲಿಕೆಯಾಗಿವೆ.
ರಾಯಚೂರು-15, ಬಳ್ಳಾರಿ ಜಿಲ್ಲೆ-15, ಕೊಪ್ಪಳ-22 ಸೇರಿ ಒಟ್ಟು 52 ನಾಮಪತ್ರ ಸಲ್ಲಿಕೆಯಾಗಿವೆ.
ಜುಲೈ 02 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಜುಲೈ 03 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅದೇ ದಿನ ಕ್ರಮಬದ್ಧ ನಾಮಪತ್ರಗಳ ಘೋಷಣೆ ಮಾಡಲಾಗುತ್ತದೆ.
ನಾಮಪತ್ರಗಳನ್ನು ಹಿಂಪಡೆಯಲು ಜುಲೈ 04 ಕೊನೆಯ ದಿನವಾಗಿದೆ. ಜುಲೈ 10 ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣಾಧಿಕಾರಿಯೂ ಆದ ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ತಿಳಿಸಿದ್ದಾರೆ.

Share This Article
error: Content is protected !!
";