Ad image

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ಪ್ರಕರಣಗಳ ತನಿಖೆ ಆರಂಭ

Vijayanagara Vani


ಬಳ್ಳಾರಿ,ಜು.02
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ನೇಮಿಸಿದ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರ ನೇತೃತ್ವದಲ್ಲಿ ತನಿಖೆ ಆರಂಭಗೊoಡಿದೆ ಎಂದು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ತಿಳಿಸಿದ್ದಾರೆ.
ಘಟಿಕೋತ್ಸವ ಪ್ರಮಾಣ ಪತ್ರಗಳ ಕಾನೂನು ಬಾಹಿರ ವಿತರಣೆ ಪ್ರಕರಣ ಕುರಿತಂತೆ ಈಗಾಗಲೇ ಮಂಗಳವಾರ ಮತ್ತು ಬುಧವಾರದಂದು ಕೆಲ ದಾಖಲಾತಿಗಳ ಪರಿಶೀಲನೆ ಕೈಗೊಳ್ಳಲಾಗಿದೆ. ಮುಂದಿನ ವಿಚಾರಣೆ ಜು.09 ರಂದು ನಿಗದಿಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬoಧಿಸಿದ ವಿದ್ಯಾರ್ಥಿ ಸಾಕ್ಷಿದಾರರ ಹಾಗೂ ಪರೀಕ್ಷಾ ವಿಭಾಗದ ಸಿಬ್ಬಂದಿಗಳ ವಿಚಾರಣೆ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಮತ್ತೊಂದು ಪ್ರಕರಣವಾದ ಡಾ.ಅನಂತ್ ಎಲ್ ಝಂಡೇಕರ್ ಅವರ ಪ್ರಕರಣದ ವಿಚಾರಣೆಯನ್ನು ಸಹ ಕೈಗೆತ್ತಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಎರಡು ಪ್ರಕರಣಗಳ ಕುರಿತಂತೆ ಯಾವುದೇ ಆಂತರಿಕ ಹಾಗೂ ಬಾಹ್ಯ ಒತ್ತಡಗಳಿಗೆ ಒಳಗಾಗದೇ ನಿಷ್ಪಕ್ಷಪಾತವಾಗಿ ತನಿಖೆ ಕೈಗೊಳ್ಳುವಂತೆ ನಿವೃತ್ತ ನ್ಯಾಯಾಧೀಶರಿಗೆ ಬೆಂಬಲ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";