: ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಕ್ರೋಢೀಕೃತ ಫಲಿತಾಂಶ ಶೇ.79.81 ಹಾಗೂ ಹೊಸಬರ ಫಲಿತಾಂಶ ಶೇ.85.19 ಫಲಿತಾಂಶ ದೊರೆತಿದೆ. ಪಿಯುಸಿ ಮೂರನೇ ಪರೀಕ್ಷೆಗೆ ಒಟ್ಟು 1,11,002 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22,446 ಅಂದರೆ ಶೇ.20.22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಹಾಜರಾತಿ ಮತ್ತು ಉತ್ತೀರ್ಣದ ಸಂಖ್ಯೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಏರಿಕೆಯಾಗಿದೆ. ಅಂಕ ಸುಧಾರಣೆಗೆ 17,398 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು 11,937 ವಿದ್ಯಾರ್ಥಿಗಳು ತಮ್ಮ ಅಂಕ ಹೆಚ್ಚಿಸಿಕೊಂಡಿದ್ದಾರೆ ಎಂದರು.
ಸಾರ್ವಜನಿಕರಿAದ ಅಹವಾಲು ಸ್ವೀಕಾರ : ಸಚಿವರು, ಪತ್ರಿಕಾಗೋಷ್ಟಿಯ ನಂತರ ಸಾರ್ವಜನಿಕರಿಂದ ಸುಮಾರು 100 ಕ್ಕೂ ಹೆಚ್ಚು ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್, ಮಾಜಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಆರ್ ಪ್ರಸನ್ನಕುಮಾರ್, ಇತರೆ ಮುಖಂಡರು ಹಾಜರಿದ್ದರು.