ರಾಯಚೂರು ಜುಲೈ 02 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಭೋಸರಾಜು ಅವರು ಜುಲೈ 5ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ, ನಂತರ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರೊಂದಿಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ರಾಯಚೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ