ಬಳ್ಳಾರಿ,ಜು.03
ಇದೇ ಜುಲೈ 05 ರಂದು ಬಳ್ಳಾರಿಯಲ್ಲಿ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕ ಅಧಿಕಾರಿಗಳ ಜೊತೆಗೂಡಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆಯೊಂದಿಗೆ ಕೆಲಸ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಸದ ಈ.ತುಕಾರಾಮ್ ಅವರು ಹೇಳಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಕುರಿತಂತೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜುಲೈ 05 ರಂದು ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿರುವ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮವು ಬಡ ಕಾರ್ಮಿಕರಿಗೆ ನೆರವು ನೀಡುವ ಮತ್ತು ಸರ್ಕಾರದ ಆಶೋತ್ತರ ಕಾರ್ಯಕ್ರಮವಾಗಿದ್ದು, ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಅAದು ನಡೆಯುವ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವರು, ಸಂಸದರು, ಶಾಸಕರು ಹಾಗೂ ಇತರರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಅಚ್ಚುಕಟ್ಟು ಆಯೋಜನೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕ 28 ವಿವಿಧ ವರ್ಗಗಳಡಿ ನೋಂದಾಯಿಸಿಕೊAಡ 2,600 ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಲಾಗುತ್ತದೆ. ಫಲಾನುಭವಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲೆಯ ವಿವಿಧೆಡೆಯಿಂದ ಸಾರ್ವಜನಿಕರನ್ನು ಕರೆತರಲು 28 ಬಸ್, 15 ಕ್ರೂಸರ್ ವಾಹನ, 500 ಆಟೋಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಅವ್ಯವಸ್ಥೆ ಉಂಟಾಗದAತೆ ನೋಡಿಕೊಳ್ಳಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ನಂತರ ಊಟ ಮತ್ತು ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಕಾರ್ಯಕ್ರಮ ನಡೆಯುವ ಸ್ಥಳ-ಸ್ವಚ್ಛತೆ ಕೈಗೊಳ್ಳಬೇಕು. ವಾಹನ ನಿಲುಗಡೆಗಾಗಿ ಅಗತ್ಯ ಜಾಗ ಗುರುತಿಸಿ, ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಬ್ಯಾನರ್ಗಳನ್ನು ಅಧಿಕೃತ ಸ್ಥಳಗಳಲ್ಲಿಯೇ ಹಾಕಬೇಕು. ನಗರದ ಸುಂದರೀಕರಣಕ್ಕೆ ಧಕ್ಕೆಯಾಗಬಾರದು ಎಂದರಲ್ಲದೇ, ಕಾರ್ಮಿಕ ಇಲಾಖೆಯ ರಾಜ್ಯ ಮತ್ತು ಜಿಲ್ಲೆಯ ಸಮಗ್ರ ಮಾಹಿತಿಯನ್ನು ಸಿದ್ಧತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಕಾರ್ಮಿಕ ಇಲಾಖೆಯ ಕ್ಲಿನಿಕ್ ಆನ್ ವೀಲ್ ಆರೋಗ್ಯ ಸಂಚಾರಿ ವಾಹನಗಳ ಚಾಲನೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಾರ್ಮಿಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಮಾತನಾಡಿ, ಬಡ ಕಾರ್ಮಿಕರಿಗೆ ಸೌಲಭ್ಯ ಒದಗಿಸುವ ಪುಣ್ಯದ ಕಾರ್ಯವಾಗಿದ್ದು, ಶಿಷ್ಠಾಚಾರದನ್ವಯ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಿ ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಬಳ್ಳಾರಿ 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಪರಶುರಾಮ್ ಎನ್.ಎಸ್., ಬಳ್ಳಾರಿ 1ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಮೇಶ್ ಗಡ್ಡದ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್.ಎ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಇದ್ದರು.