ಚಿತ್ರದುರ್ಗ.ಜುಲೈ.08:
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾಮಾಜಿಕ ನ್ಯಾಯ ಮತ್ತು ಸಮಾನತೆ ಎತ್ತಿ ಹಿಡಿಯಲು ಶ್ರಮಿಸುವಂತೆ ಜಿ.ಪಂ.ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಸಲಹೆ ನೀಡಿದರು.
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಗಳ ಪ್ರಾಯೋಜಕತ್ವದಲಿ,್ಲ ಜಿಲ್ಲಾ ತರಬೇತಿ ಸಂಸ್ಥೆ ಹಾಗೂ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ವತಿಯಿಂದ, ಇತ್ತೀಚೆಗೆ ನಗರದ ಜಿ.ಪಂ.ಸಭಾAಗಣದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ನ್ಯಾಯ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸಲು ಸರ್ಕಾರ ಜಾರಿಗೊಳಿಸಿರುವ ಕಾನೂನು ಹಾಗೂ ಕಾಯ್ದೆಗಳ ಕುರಿತು ಅಧಿಕಾರಿಗಳು ಅರಿವು ಹೊಂದಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯುರು, ವಿಶೇಷ ಚೇತನರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಇರುವ ಕಾಯ್ದೆ, ಕಾನೂನು, ನೀತಿಗಳ ಅರಿವು ಹಾಗೂ ಬಳಕೆ ಬಗ್ಗೆ ತರಬೇತಿಯಲ್ಲಿ ತಿಳುವಳಿಕೆ ನೀಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಷ್ಠಾನ ಮಾಡುತ್ತಿರುವ ಯೋಜನೆಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯೆ ಪಿ.ವಿ.ಸವಿತಾ ಸಂವಿಧಾನ ಪೀಠಿಕೆಯನ್ನು ಅಧಿಕಾರಿಗಳಿಗೆ ಬೋಧಿಸಿದರು. ಸುಸ್ಥಿರ ಸಮಾಜ: ಸಾಮಾಜಿಕ ನ್ಯಾಯದ ಮಹತ್ವ ಮತ್ತು ಪರಿಕಲ್ಪನೆ, ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ ಮತ್ತು ನಿಯಮಗಳ ಕುರಿತು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಕಿರಿಯ ಬೋಧಕ ಡಾ.ಸಚಿನ್.ಬಿ.ಎಸ್. ತರಬೇತಿ ನೀಡಿದರು. ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ದಿನಕರ್.ಪಿ.ಕೆ ದೌರ್ಜನ್ಯ ತಡೆ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ಸಹಾಯ ನಿರ್ದೇಶಕ ಗೋಪಾಲಪ್ಪ.ಎನ್ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಕುರಿತು ತಿಳಿಸಿಕೊಟ್ಟರು.
ತರಬೇತಿಯಲ್ಲಿ ಅಧಿಕಾರಿಗಳಿಗೆ ಪರಿಕ್ಷೆ ಪೂರ್ವ ತರಬೇತಿ, ಹಿಮ್ಮಾಹಿತಿ, ರಸಪ್ರಶ್ನೆ, ವಿಷಯ ಮಂಡನೆ, ಗುಂಪು ಚರ್ಚೆ ಹಾಗೂ ವಿಶೇಷ ಪ್ರಕರಣಗಳ ಕುರಿತು ಅಧ್ಯಯನ ಕಾರ್ಯಕ್ರಮಗಳು ನಡೆದವು.