Ad image

ಉದ್ಯಮ ಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ

Vijayanagara Vani
ಕೊಪ್ಪಳ ಜುಲೈ 10 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಕೊಪ್ಪಳ ಇವರ ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಪರಿಶಿಷ್ಟ ಜಾತಿಯ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು, ಎಸ್.ಎಸ್.ಎಲ್.ಸಿ. ಆಗಿರಬೇಕು. ಆಸಕ್ತರು ಕೊಪ್ಪಳ ನಗರಸಭೆ ಎದುರುಗಡೆ ಇರುವ ಜಿಲ್ಲಾ ಕೈಗಾರಿಕಾ ಕೇಂದ್ರ, ಸಿಡಾಕ್ ಜಂಟಿ ನಿರ್ದೇಶಕರ ಕಛೇರಿಗೆ ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್ಗಳ ಝರಾಕ್ಸ್ ಪ್ರತಿಗಳು ಹಾಗೂ 2 ಪಾಸಪೋರ್ಟ್ ಸೈಜ್ ಫೋಟೋಗಳೊಂದಿಗೆ ಜುಲೈ 16ರ ರೊಳಗೆ ಅರ್ಜಿಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 6362557332 ಅಥವಾ 7204016012 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";