Ad image

ಯುವನಿಧಿ : ವಿಶೇಷ ನೋಂದಣಿ ಅಭಿಯಾನ

Vijayanagara Vani
ಚಿತ್ರದುರ್ಗ ಜುಲೈ.10:
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 8 ವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಾಗಿದೆ. ನೋಂದಣಿಗಾಗಿ ಜಿಲ್ಲೆಯ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಕಾಲೇಜುಗಳು ಸೇರಿದಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್‌ಗಳನ್ನು ತೆರೆಯಲಾಗಿದೆ. ಅರ್ಹ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್, ಚಿತ್ರದುರ್ಗ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ಯುವನಿಧಿಗೆ ನೋಂದಣಿ ಮಾಡಿಕೊಳ್ಳಬಹುದು. ಈಗಾಗಲೇ ಯೋಜನೆಯಡಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ. ವಿಶೇಷ ನೋಂದಣಿ ಅಭಿಯಾನದ ಸದುಪಯೋಗ ಪಡೆದುಕೊಂಡು 2023-24 ಮತ್ತು 2024-25ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9945587060, 7022459064 ಕರೆ ಮಾಡಬಹುದು. ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಬಹುದು ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

Share This Article
error: Content is protected !!
";