ಶಿವಮೊಗ್ಗ, ಜುಲೈ 11 : : ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿAದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿಸಲಾಗುವುದು. ಅಚ್ಚುಕಟ್ಟು ರೈತರಿಗೆ ಹಾಗೂ ಸಾರ್ವಜನಿಕರಿಗೆ, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕಾರ್ಯಪಾಲಕ ಇಂಜಿನಿಯರ್, ತುಂ ಮೇ ಯೋ, ವಿಭಾಗ. ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.