Ad image

ಉಚಿತ ಇ-ಪೌತಿ ಆಂದೋಲನ

Vijayanagara Vani
ಶಿವಮೊಗ್ಗ ; ಜುಲೈ 18; : ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬ0ಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article
error: Content is protected !!
";