ಚಿತ್ರದುರ್ಗಜುಲೈ31:
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹಾಗೂ ತಮಟೆ ವಾದ್ಯ ಕಲಿಕಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆಗಸ್ಟ್ 01ರಂದು ಸಂಜೆ 7ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು “ಎ” ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದೆ.
ಉಪವಿಭಾಗಾಧಿಕಾರಿ ಮೆಹಬೂಬ್ ಜೀಲಾನಿ ಖುರೇಷಿ ಉದ್ಘಾಟನೆ ನೆರವೇರಿಸುವರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಪ್ರಾಸ್ತಾವಿಕ ನುಡಿಗಳನ್ನಾಡುವರು.ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1 ಓ.ಪರಮೇಶ್ವರಪ್ಪ, ಸರ್ಕಾರಿ ಕಲಾ ಕಾಲೇಜು “ಎ” ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ನಿಲಯ ಮೇಲ್ವಿಚಾರಕ ಬಿ.ಹೆಚ್.ನಾಗರಾಜ್ ಭಾಗವಹಿಸುವರು. ಚಿತ್ರದುರ್ಗದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಾವಿದ ಕೆ.ಗಂಗಾಧರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡುವರು ಎಂದು ಪ್ರಕಟಣೆ ತಿಳಿಸಿದೆ.