ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್ ಲೈನ್ ಮೂಲಕ ಜಿಲ್ಲೆಯ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಕೆ-ಕಿಸಾನ್ ಪೋರ್ಟ್ ಅಡಿ ರೈತ ಸಂಪರ್ಕ ಕೇಂದ್ರದ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಬಳಸಿ ಆಸಕ್ತ ರೈತ ಮತ್ತು ರೈತ ಮಹಿಳೆಯರು ಎಫ್.ಐ.ಡಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆ ಹಾಗೂ ಅಗತ್ಯ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅರ್ಜಿಯನ್ನು ನೋಂದಾಯಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಬಿ.ಮಂಜುನಾಥ್ ತಿಳಿಸಿದ್ದಾರೆ