Ad image

ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Vijayanagara Vani
ಚಿತ್ರದುರ್ಗಆಗಸ್ಟ್0:
ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಪ್ರತಿ ಹೆಕ್ಟೇರ್ಗೆ ವರ್ಷಕ್ಕೆ ರೂ.28000/-ರಂತೆ 02 ಕಂತುಗಳಲ್ಲಿ ಒಟ್ಟು ರೂ.56000/-ಗಳು ಸಹಾಯಧನ ನೀಡಲಾಗುವುದು. ಒಬ್ಬ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಬಹುದಾಗಿದ್ದು, ಆಸಕ್ತ ರೈತರು ಇದೇ ಆಗಸ್ಟ್ 16ರೊಳಗೆ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಮತ್ತು ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಸಹಾಯಧನ ಪಡೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್ಬುಕ್, ಅಧಿಕೃತ ಸಸ್ಯಗಾರಗಳಿಂದ ಸಸಿ ಖರೀದಿಸಿದ ಬಿಲ್ನ್ನು ಸಲ್ಲಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Share This Article
error: Content is protected !!
";