Ad image

ಬಳ್ಳಾರಿ: 79 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ

Vijayanagara Vani
ಬಳ್ಳಾರಿ,ಆ.14
ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಆ.15 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಬಿಎಂಸಿಆರ್‌ಸಿ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಧ್ವಜಾರೋಹಣಾ ನೆರವೇರಿಸಿ ಪಥಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೊö್ಯÃತ್ಸವದ ಸಂದೇಶ ನೀಡುವರು. ಇದಕ್ಕೂ ಮುನ್ನ ಸಚಿವರು, ಅಂದು ಬೆಳಿಗ್ಗೆ 08.20 ಕ್ಕೆ ಡಾ.ರಾಜ್‌ಕುಮಾರ್ ಉದ್ಯಾನವನದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತಿ ಇರುವರು.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ಶಾಸಕ ಡಾ.ಚಂದ್ರಶೇಖರ ಬಿ.ಪಾಟೀಲ್, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಗಣ್ಯರು ಪಾಲ್ಗೊಳ್ಳುವರು.
ಅಂದು ಬೆಳಿಗ್ಗೆ 10 ರಿಂದ ಬಿಎಂಸಿಆರ್‌ಸಿ ಮೈದಾನದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇನ್ನೀತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

Share This Article
error: Content is protected !!
";