ಬಳ್ಳಾರಿ,ಆ.14
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಆ.14 ಮತ್ತು 15 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಆ.14 ರಂದು ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿನಿAದ ಹೊರಟು 03 ಗಂಟೆಗೆ ಬಳ್ಳಾರಿಗೆ ಆಗಮಿಸುವರು. ಬಳಿಕ ಸಂಜೆ 04.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ನಗರ ಸ್ಥಳೀಯ-ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.
ಆ.15 ರಂದು ಬೆಳಿಗ್ಗೆ 08.20 ಕ್ಕೆ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಗೌರವ ಸಮರ್ಪಣೆ ಮಾಡುವರು. ಬಳಿಕ ಬೆಳಿಗ್ಗೆ 09 ಗಂಟೆಗೆ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿರುವ 79 ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ರಾಷ್ಟç ಧ್ವಜಾರೋಹಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಪಥ ಸಂಚಲನ ವೀಕ್ಷಣೆ, ಗೌರವ ವಂದನೆ ಸ್ವೀಕಾರ ಮಾಡುವರು.
ಬಳಿಕ 10.30 ಕ್ಕೆ ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ.