ಬಳ್ಳಾರಿ,ಸೆ.28
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೆ.29 ರಂದು ಹೊಸಪೇಟೆಯಿಂದ ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬಳಿಕ ಮಧ್ಯಾಹ್ನ 12.30 ರಿಂದ 01.30 ಗಂಟೆಯವರೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಏರ್ಪಡಿಸಿರುವ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು.
ನಂತರ ಮಧಾಹ್ನ 02.15 ರಿಂದ ಸಂಜೆ 06 ಗಂಟೆಯವರೆಗೆ ನಗರದ ಜಿಪಂ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಬಳಿಕ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು.
ಸೆ.30 ರಂದು ಮಧ್ಯಾಹ್ನ 03 ಗಂಟೆಗೆ ಹೊಸಪೇಟೆಯಿಂದ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ತಿಳಿಸಿದ್ದಾರೆ.