ವಿಜಯನಗರ(ಹೊಸಪೇಟೆ), ಅಕ್ಟೋಬರ್.10 : ಭವಿಷ್ಯದ ಪೀಳಿಗೆಗಾಗಿ ಹಸಿರುಕರಣಕ್ಕೆ ಆದ್ಯತೆ ನೀಡಿ ಊರಿಗೊಂದು ಕೆರೆ, ಮನೆಗೊಂದು ಮರ ಎಂಬ ಪರಿಕಲ್ಪನೆಯಲ್ಲಿ ಪ್ರತಿಯೊಬ್ಬರು ಮನೆಗಳ ಮುಂದೆ ಮರ ಬೆಳೆಸಲು ನೀರು ಹಾಕಿ ಪೋಷಣೆ ಮಾಡುವ ಸಂಕಲ್ಪ ಮಾಡಬೇಕಿದೆ ಎಂದು ಅರಣ್ಯ ಮತ್ತು ಪರಿಸರ ಜೀವಿಶಾಸ್ತç ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯನಗರ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷ ಪೂರೈಸಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಅವರು ಮಾತನಾಡಿದರು. ದೀಪಾವಳಿ ಹಬ್ಬದಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವ ಮೂಲಕ ಪರಿಸರ ಸಂರಕ್ಷಣಗೆ ಎಲ್ಲರೂ ಕೈಜೋಡಿಸಬೇಕು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊAಡು 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಪ್ರಕೃತಿ ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ರಾಜ್ಯಾದಾದ್ಯಂತ ಸುವರ್ಣ ಮಹೋತ್ಸವವನ್ನು ಆಯೋಜಿಸಲಾಗಿದೆ. ದೇಶದ ಭವಿಷ್ಯಕ್ಕೆ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾAಧಿ ಮಹತ್ತರ ಕೊಡುಗೆ ನೀಡಿದ್ದಾರೆ. 1972 ರಲ್ಲಿ ವನ್ಯಜೀವಿ ಸಂರಕ್ಷಣೆ ಕಾಯಿದೆ ಜಾರಿಗೆ ತಂದಿದ್ದಾರೆ. 1974 ರಲ್ಲಿ ಜಲ ಕಾಯಿದೆ ತಂದು ಅದರ ಅಡಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆ ಮಾಡಿದ್ದಾರೆ. 1980 ರಲ್ಲಿ ಅರಣ್ಯ ಸಂರಕ್ಷಣೆ ಕಾಯಿದೆ ಜಾರಿ ತರಲಾಗಿದೆ. 1981 ವಾಯುಮಾಲಿನ್ಯ ನಿವಾರಣೆ ಕಾಯಿದೆ ಜಾರಿಗೆ ತಂದು ಭವಿಷ್ಯದ ಭಾರತದ ಕನಸು ಕಂಡಿದ್ದ ಇಂದಿರಾಗಾAಧಿ ಅವರಿಗೆ ಶ್ರೇಯಸ್ಸು ಸಲ್ಲುತ್ತದೆ. ಇಡೀ ದೇಶ ಅಷ್ಟಲ್ಲದೇ ರಾಜ್ಯದಲ್ಲಿ ಈ ಎಲ್ಲಾ ಕಾಯಿದೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಅತಿ ಹೆಚ್ಚು ಅನೆಗಳನ್ನು ಹೊಂದಿದ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಒಟ್ಟು 6395 ಅನೆಗಳು ಇವೆ. ರಾಜ್ಯದಲ್ಲಿ 560 ಹುಲಿಗಳು ಇವೆ. ಹುಲಿಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಒಟ್ಟು ಶೇ.21 ರಷ್ಟು ಅರಣ್ಯ ಭೂಭಾಗ ಪ್ರದೇಶ, ಒಟ್ಟು 43 ಲಕ್ಷ ಹೆಕ್ಟೇರ್ ಅರಣ್ಯ ಪ್ರದೇಶವಿದೆ. 10 ಜಿಲ್ಲೆಗಳಷ್ಟು ವ್ಯಾಪ್ತಿಯ ಪಶ್ಚಿಮಘಟ್ಟ ಪ್ರದೇಶ ಮೈಚಾಚಿಕೊಂಡಿದೆ. ಇದರ ಸಂರಕ್ಷಣೆ ನಮ್ಮ ಕರ್ತವ್ಯವಾಗಿದೆ. ರಾಜ್ಯದಲ್ಲಿ 5 ರಾಷ್ಟ್ರೀಯ ಉದ್ಯಾನವನಗಳು, 5 ಹುಲಿ ಸಂರಕ್ಷಿತ ಪ್ರದೇಶಗಳು, 37 ವನ್ಯಜೀವಿಧಾಮಗಳು, 19 ಸಂರಕ್ಷಿತ ಮೀಸಲು ಪ್ರದೇಶಗಳು ಇವೆ. ಇವೆಲ್ಲವೂಗಳನ್ನು ರಕ್ಷಣೆ ಮತ್ತು ಅಭಿವೃದ್ಧಿ ಪಡಿಸುವುದು ಅರಣ್ಯ ಇಲಾಖೆಯ ಗುರುತರ ಹೊಣೆಗಾರಿಕೆಯನ್ನು ಹೊಂದಿದೆ. ರಾಜ್ಯದಲ್ಲಿನ ಕೈಗಾರಿಕೆಗಳು ಹೊರಸೂಸುವ ಅನಿಲಗಳಿಂದ ಹವಾಮಾನ ವೈಪರೀತ್ಯ ಹೆಚ್ಚಾಗುತ್ತಿದೆ. ಇಂಗಾಲ ಡೈ ಆಕ್ಸೈಡ್ ಹೆಚ್ಚಳದಿಂದ ತಾಪಮಾನ ಹೆಚ್ಚಳವಾಗುತ್ತಿದೆ. ಪ್ರಕೃತಿ ಸಮತೋಲನಕ್ಕಾಗಿ ರಾಜ್ಯದ ಜನತೆಯಲ್ಲಿ ಜಾಗೃತಿ ಹೆಚ್ಚಾಗಬೇಕಿದೆ. ಜಲಮೂಲಗಳ ಸಂರಕ್ಷಣೆಯಿAದ ಅರಣ್ಯ ಪ್ರದೇಶಗಳಿಗೆ ಅನುಕೂಲವಾಗಲಿದೆ. ಕಾರ್ಖಾನೆಗಳ ಕಲುಷಿತ ನೀರನ್ನು ನದಿಗಳಿಗೆ, ಜಲಮೂಲಗಳಿಗೆ ಹರಿಸುವುದನ್ನು ತಡೆಗಟ್ಟಬೇಕು. ತ್ಯಾಜ್ಯಪೂರಿತ ನೀರನ್ನು ಶುದ್ದೀಕರಣದ ಮೂಲಕ ಮರುಬಳಕೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಹೆಚ್ಚು ಕ್ರಿಯಾಶೀಲವಾಗಿದೆ. ಸ್ಥಳೀಯ ಸಂಸ್ಥೆಗಳು ಜಲ ಶುದ್ಧಿಕರಣ ಘಟಕ, ನೀರು ಸಂಸ್ಕರಣಾ ಘಟಕ ಆರಂಭಿಸದಿದ್ದರೇ ಮಾಲಿನ್ಯ ನಿಯಂತ್ರಣ ಮಂಡಳಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವ ದಂಡ ವಿಧಿಸುವ ಅಧಿಕಾರವನ್ನು ಹೊಂದಿದೆ. ಮನುಕುಲ ಉಳಿವಿಗಾಗಿ ಪರಿಸರ ಮತ್ತು ಪ್ರಕೃತಿ ಸಂರಕ್ಷಣೆಯ ಕಾಳಜಿಯನ್ನು ಹೊಂದಬೇಕಿದೆ. ಈಚೇಗೆ ಪ್ರಕೃತಿ ವಿಕೋಪದಿಂದ ಗುಡ್ಡಕುಸಿತಗಳು, ಮೇಘ ಸ್ಪೋಟಗಳು ಹೆಚ್ಚಾಗಿವೆ. ಜಲ ಪ್ರವಾಹಗಳು ಮತ್ತು ಮಳೆಹಾನಿಯಿಂದಾಗಿ ರಾಜ್ಯದಲ್ಲಿ ರೈತರ ಬೆಳೆಗಳು ಸಂಪೂರ್ಣವಾಗಿ ನಷ್ಟವಾಗಿದೆ. ಇದಕ್ಕೆಲ್ಲಾ ಕಡಿವಾಣ ಹಾಕುವುದಾದರೇ ನೈಸರ್ಗಿಕ ಸಂಪತ್ತನ್ನು ಹಿತಮಿತವಾಗಿ ಬಳಸುವ ಅನಿವಾರ್ಯತೆ ಇದೆ ಎಂದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇAದ್ರಸ್ವಾಮಿ ಮಾತನಾಡಿ, ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಅರಣ್ಯ ಇಲಾಖೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಜಂಟಿ ಸಹಭಾಗಿತ್ವದಲ್ಲಿ ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಸುವರ್ಣ ಮಹೋತ್ಸವದ ಮೂಲಕ ಜನಜಾಗೃತಿ ಮೂಡಿಸಲು 31 ಜಿಲ್ಲೆಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. 2023 ರಲ್ಲಿ ಹೊಸಪೇಟೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯನ್ನು ಆರಂಭಿಸಲಾಗಿದೆ. ಈ ಭಾಗದಲ್ಲಿ ಜಿಲ್ಲೆಯಲ್ಲಿ 156 ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ 2 ಸ್ಟೀಲ್ ಉತ್ಪಾದನಾ ಘಟಕಗಳು, 3 ಕಬ್ಬಿಣದ ಅದಿರು ಗಣಿಗಳು, 2 ಸ್ಪಾಂಜ್ ಐರನ್ ಘಟಕಗಳು, 2 ಸಕ್ಕರೆ ಕಾರ್ಖಾನೆಗಳು ಸೇರಿದಂತೆ ಉಳಿದಂತೆ ಸಣ್ಣ ಉದ್ಯಮಗಳನ್ನು ಹೊಂದಿದೆ. ನಿಯಮಿತವಾಗಿ ತ್ಯಾಜ್ಯ ನಿರ್ವಹಣೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ಜಲ ಮಾಲಿನ್ಯ ಮತ್ತು ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಹೆಚ್ಚು ಕಾಳಜಿ ವಹಿಸಿದೆ. ಜಿಲ್ಲೆಯಲ್ಲಿನ ಕೆಲವು ಜಲಮೂಲಗಳ ಸ್ವಚ್ಛತೆಗೆ ಕ್ರಮ ವಹಿಸಲಾಗಿದೆ. ಇಂತಹ ಎಲ್ಲಾ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಿದೆ ಎಂದರು.
ಇದೇ ವೇಳೆ ವಿಜಯನಗರ ಸಂಸದ ಈ.ತುಕಾರಾಮ್ ಅವರು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ನಿರ್ಮಾಣಗೊಳಿಸಲು ಸಿಎಸ್ಆರ್ ಅನುದಾನದಡಿಯಲ್ಲಿ ಸುಮಾರು 8000 ಬಟ್ಟೆ ಬ್ಯಾಗ್ಗಳನ್ನು ತಯಾರಿಸಿ ಉಚಿತವಾಗಿ ಸಾರ್ವಜನಿಕರಿಗೆ ವಿತರಿಸುವ ಕಾರ್ಯಕ್ಕೆ ಸಾಂಕೇತಿಕವಾಗಿ ವೇದಿಕೆಯಲ್ಲಿ ಚಾಲನೆ ನೀಡಿದರು.
ಕೊಪ್ಪಳ ಸಂಸದ ಕೆ.ರಾಜಶೇಖರ್ ಬಸವರಾಜ ಹಿಟ್ನಾಳ್ ಮಾತನಾಡಿದರು, ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪರವರು ವಹಿಸಿದ್ದರು.
ವೇದಿಕೆಯಲ್ಲಿ ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹೊಸಪೇಟೆ ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಶ್ರೀನಿವಾಸ ಗುಪ್ತಾ, ವಿಜಯನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯ ಕಾರ್ಯದರ್ಶಿ ಎಸ್.ಎಸ್.ಲಿಂಗರಾಜ, ವಿಜಯನಗರದ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳದ ಪರಿಸರ ಅಧಿಕಾರಿ ಹರಿಶಂಕರ್.ವೈ.ಎಸ್ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯನಗರದ ಪರಿಸರ ಅಧಿಕಾರಿ ಮೀನಾಕ್ಷಿ.ಹೆಚ್.ಎ ಉಪಸ್ಥಿತರಿದ್ದರು.
*****
ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಸಿ, ಪರಿಸರ ಸಂರಕ್ಷಣೆಗೆ ನೀವೂ ಕೈಜೋಡಿಸಿ. ಊರಿಗೊಂದು ಕೆರೆ, ಮನೆಗೊಂದು ಮರ ಪರಿಕಲ್ಪನೆಯಂತೆ ಎಲ್ಲರೂ ಸಂಕಲ್ಪ ಮಾಡಿ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿಕೆ.
