Ad image

ಎಚ್ ಆರ್ ಶ್ರೀನಾಥ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ.

Vijayanagara Vani
ಎಚ್ ಆರ್ ಶ್ರೀನಾಥ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ.

ಗಂಗಾವತಿ: ಗಂಗಾವತಿಯ ಚನ್ನಬಸವ ಸ್ವಾಮಿ ಕ್ರೀಡಾಂಗಣದಲ್ಲಿ ಜರುಗಿದ ಕಾಂಗ್ರೆಸ್ ಲೋಕಸಭಾ ಚುನಾವಣಾ ಬಹಿರಂಗ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಶ್ರೀನಾಥ್ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಸಂಸದ ಹೆಚ್.ಜಿ.ರಾಮುಲು ಅವರು ಆಂಜನೇಯ್ಯ ದೇವಸ್ಥಾನ ಪ್ರತಿಷ್ಠಾಪನೆ ನಿಮಿತ್ಯ ಬೂದೇಶ್ವರಿ ದೇವಸ್ಥಾನಕ್ಕೆ ತೆರಳಿದ ಹಿನ್ನಲೆಯಲ್ಲಿ ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಿದ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ರಾಜಶೇಖರ್ ಹಿಟ್ನಾಳ್ ಅವರಿಗೆ ಸಹಕಾರ ನೀಡಬೇಕೆಂದು ಕೋರಿದರು. ಬಳಿಕ ಶ್ರೀನಾಥ್ ಅವರಿಗೆ ಭಿನ್ನಾಭಿಪ್ರಾಯ ಮರೆತು ಎಲ್ಲರು ಒಗ್ಗಟ್ಟಿನಿಂದ ಪಕ್ಷಕ್ಕೆ ದುಡಿಯಬೇಕೆಂದು ಸೂಚನೆ ನೀಡಿದರು. ಇದಕ್ಕೆ ಮಾಜಿ ಎಂಎಲ್‌ಸಿ ಹೆಚ್.ಆರ್.ಶ್ರೀನಾಥ್ ಸಮ್ಮತಿ ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಬಸವರಾಜ್, ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವರಾದ ಮಲ್ಲಿಕಾರ್ಜುನ ನಾಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮೀದ್ ಮನಿಯಾರ್, ಹಿರಿಯ ಮುಖಂಡರಾದ ರಾಜಶೇಖರ್ ಮುಷ್ಟೂರ್, ಮಹೇಶ್ ಸಾಗರ್, ಬಾಗಣ್ಣ, ಕೃಷ್ಣಪ್ಪ ನಾಯಕ, ದೊಡ್ಡ ಬೋಜಪ್ಪ, ಮುಖಂಡರಾದ ಸೋಮನಾಥ್ ಭಂಡಾರಿ, ಅಯ್ಯುಬ್ ಖಾನ್, ಹನೀಫ್, ಆಸೀಫ್, ದೇವರಮನಿ ಮಲ್ಲೇಶ್, ಶಬ್ಬೀರ್, ಶೋಯೆಬ್ ಇತರರಿದ್ದರು

Share This Article
error: Content is protected !!
";