Ad image

ಮೇ 7ರಂದು ಮತದಾನ: ಮತದಾರರ ಭಾವಚಿತ್ರದ ಗುರುತಿನ ಚೀಟಿಗೆ ಪರ್ಯಾಯ ದಾಖಲೆಗಳು

Vijayanagara Vani
ಮೇ 7ರಂದು ಮತದಾನ: ಮತದಾರರ ಭಾವಚಿತ್ರದ ಗುರುತಿನ ಚೀಟಿಗೆ ಪರ್ಯಾಯ ದಾಖಲೆಗಳು

ಹೊಸಪೇಟೆ (ವಿಜಯನಗರ) ಮೇ.05 ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮೇ 7ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗೆ ಪರ್ಯಾಯ ದಾಖಲೆಗಳ ಮೂಲಕವು ಸಹ ಮತ ಚಲಾವಣೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ನೋಂದಾಯಿತ ಮತದಾರರು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹೊರತುಪಡಿಸಿ ಆಧಾರ್ ಕಾರ್ಡ್, ನರೇಗಾ ಜಾಬ್‌ಕಾರ್ಡ್, ಬ್ಯಾಂಕ್ ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆ ಕಾರ್ಡ್, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್), ವಿಶೇಷ ಚೇತನರ ಗುರುತಿನ ಚೀಟಿ, ಪ್ಯಾನ್‌ಕಾರ್ಡ್, ಎಂ.ಪಿ.ಆರ್‌ನ ಅಡಿಯಲ್ಲಿ ಆರ್.ಜಿ.ಐ ನೀಡಿರುವ ಸ್ಮಾಟ್‌ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಕೇಂದ್ರ/ರಾಜ್ಯ/ಪಿ.ಎಸ್.ಯು ಗಳ ಸೇವಾ ಗುರುತಿನ ಚೀಟಿ, ಎಂ.ಪಿ/ಎA.ಎಲ್.ಎ/ಎA.ಎಲ್.ಸಿ ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಯಂತಹ ಪರ್ಯಾಯ ದಾಖಲೆಗಳನ್ನು ಮತಗಟ್ಟೆಗಳಲ್ಲಿ ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮೇ 6ರಂದು ಮಸ್ಟರಿಂಗ್ ಕಾರ್ಯ ಮತ್ತು ಜೂನ್ 4ರಂದು ಮತ ಎಣಿಕೆ ನಡೆಯಲಿದೆ.
ಒಟ್ಟು 11,28,835 ಮತದಾರರು: 9 ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬAಧಿಸಿದAತೆ ಹಡಗಲಿ ಕ್ಷೇತ್ರದಲ್ಲಿ 218, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ 254, ವಿಜಯನಗರ ಕ್ಷೇತ್ರದಲ್ಲಿ 259, ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತ್ತು 13 ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರಪನಹಳ್ಳಿ ಕ್ಷೇತ್ರದಲ್ಲಿ 253 ಸೇರಿ ಒಟ್ಟು 1234 ಮತಗಟ್ಟೆಗಳಿದ್ದು ಅಂತಿಮ ಮತದಾರರ ಪಟ್ಟಿಯಂತೆ 5,62,166 ಪುರುಷ ಮತದಾರರು, 5,66,527 ಮಹಿಳಾ ಮತದಾರರು ಹಾಗೂ 142 ಇತರೆ ಮತದಾರರು ಸೇರಿದಂತೆ ಒಟ್ಟು 11,28,835 ಮತದಾರರಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗಲು ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಿಕಲಚೇತನರಿಗೆ ರೇಲಿಂಗ್ ಸಹಿತ ರಾಂಪ್, ನೆರಳು ಹಾಗೂ ವಿದ್ಯುತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -
Ad image

 

 

Share This Article
error: Content is protected !!
";