Ad image

ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಿನ್ನಡೆ

Vijayanagara Vani
ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹಿನ್ನಡೆ

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024 ಚುನಾವಣೆ ಮತ ಎಣಿಕೆ ಆರಂಭವಾಗಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತಗಳ ಮೊದಲ ಸುತ್ತಿನ ಎಣಿಕೆ ಆರಂಭವಾಗಿದೆ.

ಬಿ. ವೈ. ರಾಘವೇಂದ್ರ ಬಿಜೆಪಿಜೆಡಿಎಸ್ ಮೈತ್ರಿ ಅಭ್ಯರ್ಥಿ. ಕಾಂಗ್ರೆಸ್ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಸಮಯ 8.35 ಮಾಹಿತಿಯಂತೆ ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದಿದ್ದಾರೆ. ರಾಘವೇಂದ್ರ 687 ಮತಗಳನ್ನು ಪಡೆದಿದ್ದು, 611 ಮತಗಳನ್ನು ಗೀತಾ ಶಿವರಾಜ್ ಕುಮಾರ್ ಪಡೆದಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಅಂಚೆ ಮತಗಳಲ್ಲಿ ಬಿಜೆಪಿ 2252, ಕಾಂಗ್ರೆಸ್ 2018, ಈಶ್ವರಪ್ಪ 260 ಮತಗಳನ್ನು ಪಡೆದಿದ್ದಾರೆ
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹಾವೇರಿಯಲ್ಲಿ ಪುತ್ರ ಕಾಂತೇಶ್ಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡರು. ಮಾಜಿ ಸಿಎಂ ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಟೀಕೆ ಮಾಡಿದರು. ಅಂತಿಮವಾಗಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣ ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆಗೊಂಡರು.
ಶಿವಮೊಗ್ಗದಲ್ಲಿ ಇವಿಎಂ ಮತ ಎಣಿಕೆ ಮೊದಲ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 22,134. ಕಾಂಗ್ರೆಸ್ ಗೀತಾ ಶಿವರಾಜ್ ಕುಮಾರ್ 15,771 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 1092 ಮತಗಳನ್ನು ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ಬಿ. ವೈ. ರಾಘವೇಂದ್ರ ಇದ್ದು, 2ನೇ ಸ್ಥಾನದಲ್ಲಿ ಗೀತಾ ಶಿವರಾಜ್ಕುಮಾರ್ ಇದ್ದಾರೆ. ಈಶ್ವರಪ್ಪ 3ನೇ ಸ್ಥಾನದಲ್ಲಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಬಿ. ವೈ. ರಾಘವೇಂದ್ರ 33,780 ಮತ, ಗೀತಾ ಶಿವರಾಜ್ಕುಮಾರ್ 22,497 ಮತ್ತು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 2145 ಮತಗಳನ್ನು ಪಡೆದಿದ್ದಾರೆ.

 

Share This Article
error: Content is protected !!
";