ಹೊಸಪೇಟೆ (ವಿಜಯನಗರ) ಜೂನ್ 05 ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಅರಣ್ಯ ಇಲಾಖೆ, ಜಿಲ್ಲಾ ತೋಟಗಾರಿಕೆ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 5 ರಂದು ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ “ಜನ-ವನ ಒಬ್ಬರಿಗೊಂದು ಮರ” “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮ ನಡೆಯಿತು.
ಹೊಸಪೇಟೆಯ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ ಎ ನಂದಗಡಿ ಅವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೇ ದೇಶದ ಅಭಿವೃದ್ಧಿಗೆ ಆ ದೇಶದ ಆರ್ಥಿಕ ಸಂಪನ್ಮೂಲಗಳ ಜೊತೆಗೆ ಪರಿಸರವು ಸಹ ತಳಪಾಯವಾಗಿರುತ್ತದೆ. ಈ ನಿಟ್ಟಿನಲ್ಲಿ ಭವಿಷ್ಯದ ಬಗ್ಗೆ ಯೋಚಿಸಿ ನಾವೆಲ್ಲರು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು. ಪ್ರಾಣಿ ಮತ್ತು ಪಕ್ಷಿಗಳ ಸಹ ಪರಿಸರದ ಭಾಗವಾಗಿದ್ದು ಹಣ್ಣು ಹಂಪಲದ ಸಸಿ ನೆಡಲು ಹೆಚ್ಚಿನ ಒತ್ತು ಕೊಡಬೇಕು ಎಂದು ತಿಳಿಸಿದರು. ಆರೋಗ್ಯದ ದೃಷ್ಟಿಯಿಂದ ಯೋಚಿಸಿ ಔಷಧಿ ಗುಣದ ಸಸಿಗಳನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವುದು ಇಂದಿನ ಅತೀ ಅಗತ್ಯವಾಗಿದೆ. ಆಯುಷ್ ಇಲಾಖೆ, ಅರಣ್ಯ ಇಲಾಖೆಗಳು ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ಮಾಡಿದರು.
ಪರಿಸರದ ಸಂರಕ್ಷಣೆಯಲ್ಲಿ ನನ್ನ ಪಾತ್ರವು ಸಹ ಇದೆ ಎಂದು ಯೋಚಿಸಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆ ಅಂಗಳದಲ್ಲಿ, ತಾವುಗಳು ಕೆಲಸ ಮಾಡುವ ಸ್ಥಳದಲ್ಲಿ ಕನಿಷ್ಟ ಒಂದು ಸಸಿಯನ್ನಾದರು ನೆಟ್ಟು ಅದನ್ನು ಬೆಳೆಸಿದಲ್ಲಿ ಪರಿಸರ ದಿನಾಚರಣೆಗೆ ಅರ್ಥ ಬರಲಿದೆ ಎಂದು ಸಲಹೆ ಮಾಡಿದರು.
ನಮಗೆ ಜೀವ ನೀಡಿದ ನಮ್ಮ ಭೂಮಿಯನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕೆಲಸವಾಗಿದೆ. ನಮ್ಮ ಭೂಮಿಯನ್ನು ಸಂರಕ್ಷಿಸುವುದೆAದರೆ ನಮ್ಮ ಭವಿಷ್ಯದ ದಿನಗಳನ್ನು ರಕ್ಷಣೆ ಮಾಡಿದಂತೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅರ್ಸಲನ್ ಅವರು ಮಾತನಾಡಿ, ಬರಗಾಲವನ್ನು ತಡೆಯುವ ಶಕ್ತಿ ಗಿಡಮರಗಳಿಗಿದೆ. ಮರಗಳನ್ನು ಕಡಿಯುವುದರಿಂದ, ಕಾಡಿಗೆ ಬೆಂಕಿ ಹಚ್ಚುವುದರಿಂದ ಹಾಗೂ ಇನ್ನೂ ಬೇರೆ ಬೇರೆ ಕಾರಣಾಂತರಗಳಿAದ ನಮ್ಮ ಭೂಮಿ, ಪರಿಸರ ನಾಶವಾಗುತ್ತಿದೆ. ಆದ್ದರಿಂದ ಗಿಡಮರಗಳನ್ನು ನಾಶಮಾಡುವುದನ್ನು ತಡೆಯಬೇಕು. ಅತೀ ಹೆಚ್ಚಿನ ಪ್ರಮಾಣದಲ್ಲಿ ನಾವು ಗಿಡಮರಗಳನ್ನು ಬೆಳೆಸಿ, ಅರಣ್ಯ ಸಂಪತ್ತನ್ನು ಉಳಿಸಬೇಕು ಎಂದು ಮನವಿ ಮಾಡಿದರು.
ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಬಿ. ಹುಲ್ಲೂರು, ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ, ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ಅಶೋಕ ಎಚ್.ಆರ್., ಗೌರವಾನ್ವಿತ 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಂಜೀವಕುಮಾರ್.ಜಿ, ಗೌರವಾನ್ವಿತ 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಚೈತ್ರ. ಜೆ., ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಕೆ. ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಶ್ರೀನಿವಾಸಮೂರ್ತಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ರಾಜೇಶ ನಾಯಕ, ವಿಜಯನಗರ ವಲಯ ಅರಣ್ಯಾಧಿಕಾರಿಗಳಾದ ಭರತ್‌ರಾಜ್ ಎಂ.ಎ, ಜಿಲ್ಲಾ ಆಯುಷ್ ಅಧಿಕಾರಿಗಳಾದ ಸುಜಾತ ಪಾಟೀಲ, ಎನ್.ಎಂ.ಸೌದಗರ್, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ತಾಲೂಕು ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಎಸ್.ಬಿ.ಕೆ ಕಮತಗಿ ಅವರು ನಿರೂಪಿಸಿದರು