Ad image

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಥಾ; ಇಂದು.ವಿಶೇಷ ಕಾರ್ಯಕ್ರಮ

Vijayanagara Vani
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಥಾ; ಇಂದು.ವಿಶೇಷ ಕಾರ್ಯಕ್ರಮ
ಹೊಸಪೇಟೆ (ವಿಜಯನಗರ) ಜೂನ್ 11 : ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಡಾನ್ ಬೋಸ್ಕೋ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜೂನ್ 12 ರಂದು “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ” ಕಾರ್ಯಕ್ರಮ ನಡೆಯಲಿದೆ.
ಈ ನಿಮಿತ್ತ ಬೆಳಿಗ್ಗೆ 9.30ಕ್ಕೆ ಸರ್ದಾರ್ ಪಟೇಲ್ ಸರ್ಕಾರಿ ಪ್ರೌಢಶಾಲೆ ಹೊಸಪೇಟೆಯಿಂದ ಜಾಥಾ ಆರಂಭವಾಗಿ ಬಳ್ಳಾರಿ ವೃತ್ತದ ಮೂಲಕ ಬಸ್ ಡಿಪೋ ರಸ್ತೆಯಿಂದ ಮೂರು ಅಂಗಡಿ ವೃತ್ತದ ಮುಖ್ಯ ರಸ್ತೆಯ ಮೂಲಕ ಡಾನ್ ಬೋಸ್ಕೋ ಸಂಸ್ಥೆಯ ವೇದಿಕೆಗೆ ತಲುಪುವುದು. ಜಾಥಾಕ್ಕೆ ಹೊಸಪೇಟೆಯ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ ಎ ನಂದಗಡಿ ಅವರು ಚಾಲನೆ ನೀಡುವರು.
ಬಳಿಕ ಬೆಳಗ್ಗೆ 10 ಗಂಟೆಗೆ ಡಾನ್ ಬೋಸ್ಕೋ ಸಂಸ್ಥೆಯಲ್ಲಿ ವೇದಿಕೆಯ ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಬಿ. ಹುಲ್ಲೂರು ಅವರು ಉದ್ಘಾಟಿಸುವರು.
ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ, ಗೌರವಾನ್ವಿತ ಅಪರ ಸಿವಿಲ್ ನ್ಯಾಯಾಧೀಶರಾದ ಅಶೋಕ ಎಚ್.ಆರ್., ಗೌರವಾನ್ವಿತ 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಂಜೀವಕುಮಾರ್.ಜಿ, ಗೌರವಾನ್ವಿತ 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಚೈತ್ರ. ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು ಎಲ್., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಯುವರಾಜ ನಾಯ್ಕ, ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತುರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಕೆ. ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಶ್ರೀನಿವಾಸಮೂರ್ತಿ, ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಲಕನ್ ಆರ್.ಮಸುಗುಪ್ಪಿ, ಹೊಸಪೇಟೆ ಪೊಲೀಸ್ ಠಾಣೆಯ ಸಂಚಾರಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ರವೀಂದ್ರ ವೈ.ವಿ., ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಪಾ.ರೋಷನ್, ಸಮಾಜ ಕಾರ್ಯ ವಿಭಾಗದ ನಿರ್ದೇಶಕರಾದ ಪಾ.ಪ್ರಾನ್ಸಿಸ್ ಉಪಸ್ಥಿತರಿರುವರು.
ವಿಶೇಷ ಉಪನ್ಯಾಸ: ವಕೀಲರ ಸಂಘದ ಸದಸ್ಯರಾದ ಎ ಕರುಣಾನಿಧಿ ಅವರು ಇದೆ ವೇಳೆ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Share This Article
error: Content is protected !!
";