ರಾಯಚೂರು,ಜೂ.20ಸಣ್ಣ, ಸಣ್ಣ ಉದ್ಯಮಗಳನ್ನು ಪ್ರಾರಂಭ ಮಾಡಿ ಅವುಗಳನ್ನು ಸರಿಯಾಗಿ ನಡೆಸಿಕೊಂಡು ಹೋಗಿ ಮುಂದೆ ದೊಡ್ಡ ದೊಡ್ಡ ಉದ್ಯಮಗಳನ್ನಾಗಿ ಮಾಡಲು ಮುಖ್ಯವಾಗಿ ಉದ್ಯಮಶೀಲರು ಮನಸ್ಸು ಮಾಡಬೇಕು ಎಂದು ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು. ಹುಡೇದ್ ಸ್ವ-ಸಹಾಯ ಗುಂಪಿನ ಅಭ್ಯರ್ಥಿಗಳಿಗೆ ಕಿವಿ ಮಾತು ಹೇಳಿದರು.
ಅವರು ಜೂ.18ರ ಮಂಗಳವಾರ ದಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶಿಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಮಾತನಾಡಿದರು.
ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಹಾಗೂ ಈಗಾಗಲೇ ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಸಂಬAಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ, ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳಿಂದ ಉಪನ್ಯಾಸ ಅಥವಾ ಮಾಹಿತಿ ನೀಡಲಾಯಿತು ಎಂದರು.
ಈ ವೇಳೆ ಕಾರ್ಯಕ್ರಮದ ಜಿಲ್ಲಾ ವವ್ಯಸ್ಥಾಪಕರಾದ ಶ್ರೀಕಾಂತ ಅವರು ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ ತಿಳಿಹೇಳಿದರು.
ಸಿಡಾಕ್ ತರಭೇತಿದಾರರು ನಾಗರಾಜ ಕೆ ಅವರು ಮಾತನಾಡಿ, ಸರಿಯಾದ ಗುರಿಯನ್ನು ಇಟ್ಟುಕೊಂಡು ಆ ಗುರಿಯನ್ನು ಮುಟ್ಟಲು ಸತತ ಪ್ರಯತ್ನ, ದಕ್ಷತೆ, ಪ್ರಾಮಾಣಿಕತೆ, ಧನಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಭಾಗ್ಯಲಕ್ಷಿö್ಮ, ಲಲಿತಾ, ರವಿಕುಮಾರ, ಮೌನೇಶ ಸೇರಿದಂತೆ 32 ತರಬೇತಿ ಅಭ್ಯರ್ಥಿಗಳು ಹಾಜರಿದ್ದರು.