Ad image

ಕಾರ್ಮಿಕ ಇಲಾಖೆಯಿಂದ ಸಿರವಾರ ಪಟ್ಟಣದ ವಿವಿಧ ಕಡೆ ತಪಾಸನೆ: ಬಾಲಕನ ರಕ್ಷಣೆ

Vijayanagara Vani
ಕಾರ್ಮಿಕ ಇಲಾಖೆಯಿಂದ ಸಿರವಾರ ಪಟ್ಟಣದ ವಿವಿಧ ಕಡೆ ತಪಾಸನೆ: ಬಾಲಕನ ರಕ್ಷಣೆ

ರಾಯಚೂರು,ಜೂ.22 ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳಿಂದ ಜಿಲ್ಲೆಯ ಸಿರವಾರ ಪಟ್ಟಣದ ವಿವಿಧ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಇನ್ನಿತರೆ ಕಡೆ ತಪಾಸಣೆ ಮಾಡಿ, ಒಬ್ಬ ಕಿಶೋರ ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರವಾರ ಪಟ್ಟಣದ ಲಿಂಗಸೂಗೂರು ರಸ್ತೆಯ ಆಂಜಿನಯ್ಯ ದೇವಸ್ಥಾನದ ಎದುರುಗಡೆಯ ವೆಂಕಟೇಶ್ವರ ಬೈಕ್ ಪಾಯಿಂಟ್‌ನ ಮಾಲೀಕ ಎಮ್.ರಾಮಕೃಷ್ಣ ಅವರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲೆ ಮಾಡಲಾಗಿದೆ.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000/-ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ.

ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆ.

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ಸಿರವಾರ ಕಾರ್ಮಿಕ ನಿರೀಕ್ಷಕರಾದ ಶಾಂತಮೂರ್ತಿ, ಶಿಕ್ಷಣ ಇಲಾಖೆಯ ತವನಪ್ಪ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣ ಘಟಕದ ದಿನೇಶ, ಮಕ್ಕಳ ಸಹಾಯವಾಣಿ ಘಟಕದ ಮುಕ್ಕಣ್ಣ, ಶಿಶು ಅಬಿವೃದ್ಧಿ ಯೋಜನೆ ಇಲಾಖೆ ನಾಗಮ್ಮ ಸೇರಿದಂತೆ ಇತರರು ಇದ್ದರು.

Share This Article
error: Content is protected !!
";