Ad image

ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ .ಇತ್ತ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಗ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದರೆ,

Vijayanagara Vani
ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ .ಇತ್ತ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಗ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದರೆ,

ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ವಿವರಣೆ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಠಾಣೆಗೆ ಆಗಮಿಸಿದ್ದರು. ಆಗ ಅವರ ವಿಚಾರಣೆ ನಡೆದಿತ್ತು. ಈಗ ಪೊಲೀಸರು ಬಂಧನದ ಕುರಿತು ಖಚಿತ ಮಾಹಿತಿ ನೀಡಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಗಾಗಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ನೇಮಕಗೊಂಡಿದ್ದಾರೆ. ಭಾನುವಾರ ಮುಂಜಾನೆ 4 ಗಂಟೆವರೆಗೂ ಅವರ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಬಳಿಕ ಬಂಧಿಸಿದ್ದಾರೆ.

ಹಾಸನದ ಮಾಜಿ ಸಂಸದ, ಸೂರಜ್ ರೇವಣ್ಣ ಸಹೋದರ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ. ಅವರು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ. ಈಗ ಸೂರಜ್ ರೇವಣ್ಣ ಸಹ ಬಂಧನವಾಗಿದ್ದು, ರೇವಣ್ಣ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಪ್ರಕರಣ ಬೆಂಗಳೂರಿಗೆ ವರ್ಗ: ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್ ರೇವಣ್ಣ ವಿಚಾರಣೆಯನ್ನು ಠಾಣೆಯಲ್ಲಿ ನಡೆಸಿದ್ದ ತನಿಖಾಧಿಕಾರಿ ಬಳಿಕ ಹಾಸನ ನಗರದ ಸೆನ್ ಠಾಣೆಯಲ್ಲೇ ಸೂರಜ್ ಮಲಗಲು ವ್ಯವಸ್ಥೆ ಮಾಡಿದ್ದರು. ಭಾನುವಾರ ಅವರ ವಿಚಾರಣೆ ಮುಂದುವರೆಯಲಿದೆ. ಅದಕ್ಕೂ ಮೊದಲು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೂರಜ್ ರೇವಣ್ಣ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಕಾರಣ ಅವರ ವಿರುದ್ಧದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಸದ್ಯ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಕೂಡ ವರ್ಗಾವಣೆ ಅಗುವ ನಿರೀಕ್ಷೆ ಇದ್ದು, ಈ ಕುರಿತು ಪೊಲೀಸರು ಕಾನೂನು ತಜ್ಞರ ಜೊತೆ ಚರ್ಚೆ ನೆಸಿದ್ದಾರೆ. ಪ್ರಕರಣ ವರ್ಗಾವಣೆ ಆದರೆ ಸೂರಜ್ ರೇವಣ್ಣರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

 

Share This Article
error: Content is protected !!
";