ಚಿತ್ರದುರ್ಗ
ಜೂನ್ 30ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂನ್ 30ರಂದು ಚಿತ್ರದುರ್ಗ ನಗರದ ಒಟ್ಟು 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ನಡೆಯುವ ಎಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ, ಸಿ.ಇ.ಟಿ ಕೋಚಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಜೂನ್ 30ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ವೈರ್‍ಲೆಸ್, ಕ್ಯಾಲುಕಲೇಟರ್, ಲಾಗ್‍ಟೇಬಲ್ಸ್, ಮೊಬೈಲ್ ಫೋನ್‍ಗಳನ್ನು ಮತ್ತಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.