ಕಾರವಾರ. ಜೂ.27 ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಎನ್.ಕೆ.ಬೈಲು (ನೆಲ್ಲೂರು ಕಂಚಿನಬೈಲು) ನಲ್ಲಿ ಭೂ ಸ್ವಾಧೀನ ಪಡಿಸಿಕೊಂಡಿರುವ 58.11 ಎಕರೆಗೆ ಸಂಬ0ಧಿಸಿದ0ತೆ, ಸಂತ್ರಸ್ಥರಿಗೆ ಇದುವರೆಗೆ ಪರಿಹಾರ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಈ ಎಲ್ಲಾ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ದೊರಕಿಸಲು ತಾವೇ ದೆಹಲಿಯ ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸೀಬರ್ಡ್ ಯೋಜನೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎನ್.ಕೆ.ಬೈಲು ನಲ್ಲಿ ಸೀ ಬರ್ಡ್ ನೌಕಾನೆಲೆ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ 58.11 ಎಕರೆಗೆೆ ಸಂಬ0ಧಿಸಿದ0ತೆ, ಈ ಭೂಮಿಯ ಸಂತ್ರಸ್ಥರಿಗೆ ಇದುವರೆಗೂ ಪರಿಹರ ದೊರೆತಿಲ್ಲ ಅಲ್ಲದೇ ಈ ಭೂಮಿಯಲ್ಲಿ ಯಾವುದೇ ಕೃಷಿ ಚಟುವಟಿಕೆ ಮಾಡಲು ಸಹ ಅನುಮತಿ ನೀಡುತ್ತಿಲ್ಲ. ಈ ಭೂಮಿಗೆ ಈಗಾಗಲೇ 18 ಕೋಟಿ 91 ಲಕ್ಷ ರೂ ಗಳ ಪರಿಹಾರದ ಮೊತ್ತವನ್ನು ಬಿಡುಗಡೆಗೊಳಿಸುವಂತೆ ಬೆಂಗಳೂರಿನ ಡಿಫೆನ್ಸ್ ಎಸ್ಟೆಟ್ ಅಧಿಕಾರಿಗಳೊಂದಿಗೆ ಹಲವು ಪತ್ರ ಬರೆದರೂ ಸಹ ಯಾವುದೇ ಪ್ರಗತಿಯಾಗಿಲ್ಲ.
ಈ ವಿಷಯದ ಕುರಿತಂತೆ ಬೆಂಗಳೂರಿನಲ್ಲಿರುವ ಡಿಫೆನ್ಸ್ ಎಸ್ಟೆಟ್ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಈ ಕುರಿತಂತೆ ಪ್ರಸ್ಥಾವನೆಯು ದೆಹಲಿಯ ರಕ್ಷಣಾ ಸಚಿವಾಲದಯಲ್ಲಿ ಬಾಕಿ ಇರುವ ಬಗ್ಗೆ ತಿಳಿದು, ರಕ್ಷಣಾ ಇಲಾಖೆಯೊಂದಿಗೆ ನಡೆಸಿರುವ ಪತ್ರ ವ್ಯವಹಾರಗಳನ್ನು ಪ್ರತಿಯನ್ನು ತಮಗೆ ನೀಡುವಂತೆ ಹಾಗೂ ಈ ಪ್ರಕರಣದ ಬಗ್ಗೆ ತಾವೇ ಖುದ್ದು ರಕ್ಷಣಾ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ಹೇಳಿದರು.
ನೌಕಾನೆಲೆಯ ಕಾರಣದಿಂದ ಭೂಮಿ ಕಳೆದುಕೊಂಡಿರುವ 158 ಕುಟುಂಬಗಳಲ್ಲಿ ವಿವಿಧ ಕಾರಣಗಳಿಂದ ಇದುವರೆಗೆ ಪರಿಹಾರ ದೊರೆಯದ ಕುಟುಂಬಗಳಿಗೆ ಸಂಬ0ದಿಸಿದ0ತೆ 1 ತಿಂಗಳ ಒಳಗೆ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಪರಿಹರ ದೊರೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಮುದಗಾದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಅಣೆಕಟ್ಟುನಿಂದಾಗಿ ಮಳೆಗಾಲದಲ್ಲಿ ನೌಕಾನೆಲೆಯೊಳಗೆ ನೀರು ನುಗ್ಗುತ್ತಿರುವ ಬಗ್ಗೆ ರಕ್ಷಣಾ ಇಲಾಖೆಯಿಂದ ಬರುತ್ತಿರುವ ದೂರುಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕೋಸ್ಟ್ಗಾರ್ಡ್ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಿಗೆ ವಾಹನಗಳ ಸಂಚಾರಕ್ಕೆ ರಸ್ತೆ ಸಂಪರ್ಕದ ಸಮಸ್ಯೆಯಿರುವ ಬಗ್ಗೆ ನಡೆದ ಚರ್ಚೆಗೆ ಸಂಬ0ಧಿಸಿದ0ತೆ ಜಿಲ್ಲಾಡಳಿದೊಂದಿಗೆ ಚರ್ಚಿಸಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ರಾಷ್ಟಿಯ ಹೆದ್ದಾರಿ ಕಾಮಗಾರಿಗೆ ಸಂಬoಧಿಸಿದ0ತೆ ಬ್ಲಾಕ್ ಸ್ಟಾಟ್ಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅಪಘಾತಗಳನ್ನು ನಿಯಂತ್ರಿಸುವoತೆ ಮತ್ತು ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸುವಂತೆ ಐ.ಆರ್.ಬಿ ಇಂಜಿನಿಯರ್ಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಉಪ ವಿಭಾಗಾಧಿಕಾರಿಗಳಾದ ಕನಿಷ್ಠ. ಕಲ್ಯಾಣಿ ಕಾಂಬ್ಳೆ, ನೌಕಾದಳ ಮತ್ತು ಕೋಸ್ಟ್ ಗಾರ್ಡ್ನ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.