Ad image

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜೂ.27
ಪ್ರಸ್ತಕ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ (ರಾಜ್ಯ ವಿದ್ಯಾರ್ಥಿ ನಿಲಯಗಳ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವಿಳಾಸ https://shp.karnataka.gov.in/ ಇಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.
ವಿದ್ಯಾರ್ಥಿನಿಲಯಕ್ಕೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವೆಬ್ಸೈಟ್ https://shp.karnataka.gov.in/ ಅಲ್ಲಿ ನೋಡಬಹುದು.
ವಿದ್ಯಾರ್ಥಿಗಳು 2024-25ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ವಿದ್ಯಾರ್ಥಿಗಳ ಸ್ಯಾಟ್ಸ್ ಐಡಿಯನ್ನು ಪ್ರಸಕ್ತ ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 08392-275751 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";