Ad image

ಸಣ್ಣ ನಿರ್ಲಕ್ಷ್ಯ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ ; ಸಿ.ಇ.ಓ ಸುರೇಶ್ ಬಿ.ಇಟ್ನಾಳ್

Vijayanagara Vani
ಸಣ್ಣ ನಿರ್ಲಕ್ಷ್ಯ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ ; ಸಿ.ಇ.ಓ ಸುರೇಶ್ ಬಿ.ಇಟ್ನಾಳ್
ದಾವಣಗೆರೆ, ಜೂ.28 ; ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಮನಗರ ಎಸ್.ಓ.ಜಿ. ಕಾಲೋನಿಯಲ್ಲಿ `ಡೆಂಗಿ ಜ್ವರ ನಿಯಂತ್ರಣ, ನಮ್ಮೆಲ್ಲರ ಜವಬ್ದಾರಿ` ವಾರಕ್ಕೆ ಒಂದು ದಿನ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಾವು ಬಳಸಿ ಎಸೆಯುವ ಟೀಕಫ್, ಪ್ಲಾಸ್ಟಿಕ್ ಬಾಟಲ್, ಡಬ್ಬಗಳು, ನಿರುಪಯುಕ್ತ ವಸ್ತುಗಳಲ್ಲಿ ಮಳೆಗಾಲದಲ್ಲಿ ನೀರು ಸಂಗ್ರಹವಾಗುವುದರಿಂದ ಈಡಿಸ್ ಸೊಳ್ಳೆಯ ಲಾರ್ವಾಗಳು ಬೆಳೆಯುತ್ತವೆ. ಮನೆ, ಶಾಲಾ ಕಾಲೇಜು, ಕಚೇರಿ, ಅಂಗನವಾಡಿ, ಅಂಗಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ಈಡಿಸ್ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸ್ವಚ್ಛತೆಗೆ ಆದ್ಯತೆ ನೀಡೋಣ ಎಂದರು.
ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಡೆಂಗಿಜ್ವರದಿಂದ ರಕ್ಷಿಸಿಕೊಳ್ಳಲು ನೀಡುವ ಸಲಹೆ-ಸೂಚನೆಗಳನ್ನು ತಪ್ಪದೇ ಪಾಲಿಸಿ, ಸ್ವಯಂರಕ್ಷಣಾ ವಿಧಾನಗಳನ್ನು ಅನುಸರಿಸೋಣ. ಸಾರ್ವಜನಿಕರಿಗೆ ಈ ಎಲ್ಲಾ ವಿಷಯದ ಬಗ್ಗೆ ತಿಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ.ಎಸ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಗಂಗಾಧರ್.ಕೆ.ಹೆಚ್. ತಾಲ್ಲೂಕು ಆರೋಗ್ಯಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು
Share This Article
error: Content is protected !!
";