Ad image

ಜುಲೈ 2ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

Vijayanagara Vani
ಜುಲೈ 2ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ಚಿತ್ರದುರ್ಗಜೂನ್.28:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜುಲೈ 2ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ. ಕಾರಜೋಳ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್. ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಹಾಗೂ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸುವರು. ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ.ಸಂತೋಷ ಪವಾರ್ ಉಪನ್ಯಾಸ ನೀಡುವರು. ಚಳ್ಳಕೆರೆ ತಾಲ್ಲೂಕು ಬೋಸೆದೇವರಹಟ್ಟಿಯ ಎನ್.ಮಂಜಣ್ಣ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
Share This Article
error: Content is protected !!
";